ಕೋವಿಡ್-19: ರಾಜ್ಯದಲ್ಲಿ ಇಂದು 299 ಹೊಸ ಸೋಂಕು ಪ್ರಕರಣ, 2 ಸಾವು ವರದಿ
ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕದ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 299 ಹೊಸ ಸೋಂಕು ಪ್ರಕರಣಗಳು ಮತ್ತು 4 ಸಾವು ವರದಿಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕದ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 299 ಹೊಸ ಸೋಂಕು ಪ್ರಕರಣಗಳು ಮತ್ತು 4 ಸಾವು ವರದಿಯಾಗಿದೆ.
ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರು ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ಇಂದು ಒಟ್ಟು 299 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ 38301ಕ್ಕೆ ಏರಿಕೆಯಾಗಿದೆ.
ರಾಜಧಾನಿ ಬೆಂಗಳೂರು ನಗರವೊಂದರಲ್ಲಿಯೇ 210 ಮಂದಿ ಸೋಂಕಿತರು ಪತ್ತೆಯಾಗಿದ್ದು, ಸೋಂಕಿನಿಂದ ನಗರದಲ್ಲಿ ಓರ್ವ ರೋಗಿ ಸಾವನ್ನಪ್ಪಿದ್ದಾರೆ. ಇನ್ನು ರಾಜ್ಯಾದ್ಯಂತ ಇಂದು 318 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ರಾಜ್ಯದಲ್ಲಿ ಗುಣಮುಖರ ಸಂಖ್ಯೆ 2958117ಕ್ಕೇರಿದೆ. ಪ್ರಸ್ತುತ ರಾಜ್ಯದಲ್ಲಿ 7117 ಸಕ್ರಿಯ ಪ್ರಕರಣಗಳಿವೆ.
ಅಂತೆಯೇ ಇಂದು ರಾಜ್ಯದಲ್ಲಿ 12 ಹೊಸ ಓಮಿಕ್ರಾನ್ ಸೋಂಕಿತರು ಪತ್ತೆಯಾಗಿದ್ದು, ಆ ಮೂಲಕ ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಪ್ರಸ್ತುತ ಪಾಸಿಟಿವಿಟಿ ದರ ಶೇ.0.23ರಷ್ಟಿದ್ದು, ಮರಣ ಪ್ರಮಾಣ ಶೇ.0.66ರಷ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


