ರಾಜ್ಯ

ಕೋವಿಡ್-19: ರಾಜ್ಯದಲ್ಲಿಂದು 405 ಹೊಸ ಪ್ರಕರಣ ಪತ್ತೆ, 267 ಗುಣಮುಖ, 4 ಸೋಂಕಿತರು ಸಾವು

ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ತುಸು ಹೆಚ್ಚಿನ ಪ್ರಕರಣಗಳು ವರದಿಯಾಗಿವೆ. 405 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3003969ಕ್ಕೆ ಏರಿಕೆಯಾಗಿದೆ.

ಕೋವಿಡ್-19: ರಾಜ್ಯದಲ್ಲಿಂದು 405 ಹೊಸ ಪ್ರಕರಣ ಪತ್ತೆ, 267 ಗುಣಮುಖ, 4 ಸೋಂಕಿತರು ಸಾವು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ತುಸು ಹೆಚ್ಚಿನ ಪ್ರಕರಣಗಳು ವರದಿಯಾಗಿವೆ. 405 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3003969ಕ್ಕೆ ಏರಿಕೆಯಾಗಿದೆ.

 267 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟಾರೇ ಗುಣಮುಖರಾದವರ ಸಂಖ್ಯೆ 29,58,384ಕ್ಕೆ ಏರಿದೆ. ರಾಜ್ಯದಲ್ಲಿ ಸದ್ಯ 7,251 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಸೋಂಕಿನ ಪ್ರಮಾಣ ಶೇ. 0.35 ರಷ್ಟಿದ್ದು, ಮರಣ ಪ್ರಮಾಣ ಶೇ. 0.98 ರಷ್ಟಿದೆ. ಬೆಂಗಳೂರಿನಲ್ಲಿ 254 ಹೊಸ ಪ್ರಕರಣ ಪತ್ತೆಯಾಗಿದ್ದು, 128 ಸೋಂಕಿತರು ಗುಣಮುಖರಾಗಿದ್ದಾರೆ. ಇಬ್ಬರು ಸಾವನ್ನಪ್ಪಿದ್ದಾರೆ.

ಬಾಗಲಕೋಟೆ,  ಬಳ್ಳಾರಿ, ಬೀದರ್, ಚಿತ್ರದುರ್ಗ, ದಾವಣಗೆರೆ, ಗದಗ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ. 

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.