ರಾಜ್ಯ

ರಾಜ್ಯಸಭಾ ಮಾಜಿ ಸದಸ್ಯ ಕೆ.ಆರ್.ಜಯದೇವಪ್ಪ ನಿಧನ: ವಿಧಾನಸಭೆಯಲ್ಲಿ ಸಂತಾಪ

ರಾಜ್ಯಸಭೆಯ ಮಾಜಿ ಸದಸ್ಯರಾದ ಕೆ.ಆರ್.ಜಯದೇವಪ್ಪ ಅವರು ವಯೋ ಸಹಜ ನಿನ್ನೆ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮೃತ ಹಿರಿಯ ಗಣ್ಯರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಲಾಯಿತು.

ರಾಜ್ಯಸಭಾ ಮಾಜಿ ಸದಸ್ಯ ಕೆ.ಆರ್.ಜಯದೇವಪ್ಪ ನಿಧನ: ವಿಧಾನಸಭೆಯಲ್ಲಿ ಸಂತಾಪ
ಕೆ.ಆರ್.ಜಯದೇವಪ್ಪ
Published On :

ಬೆಳಗಾವಿ: ರಾಜ್ಯಸಭೆಯ ಮಾಜಿ ಸದಸ್ಯರಾದ ಕೆ.ಆರ್.ಜಯದೇವಪ್ಪ ಅವರು ವಯೋ ಸಹಜ ನಿನ್ನೆ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮೃತ ಹಿರಿಯ ಗಣ್ಯರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಲಾಯಿತು.

ಕೆ.ಆರ್.ಜಯದೇವಪ್ಪ ಅವರು, ಮೂಲತಃ ದಾವಣಗೆರೆಯವರು. ವೃತ್ತಿಯಲ್ಲಿ ವಕೀಲರಾಗಿದ್ದರು. ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಜಯದೇವಪ್ಪ ಅವರು ಅಪಾರ ಸೇವೆ ಸಲ್ಲಿಸಿದ್ದಾರೆ. 1992 ರಿಂದ 1998ರ ಅವಧಿಯಲ್ಲಿ ರಾಜ್ಯಸಭಾ ಸದಸ್ಯರಾಗಿಯೂ ಕೊಡುಗೆ ನೀಡಿದ್ದಾರೆ ಎಂದು ಸಭಾಧ್ಯಕ್ಷರು ಸಂತಾಪ ಸೂಚಿಸಿದರು.

ಧಾರ್ಮಿಕ, ರಾಜಕೀಯ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿರುವ ಕೆ.ಆರ್.ಜಯದೇವಪ್ಪ ಅವರ ಅಂತ್ಯ ಸಂಸ್ಕಾರ, ಇಂದು ಮಧ್ಯಾಹ್ನ ಬಾಡದಿಂದ ಕಂದಲ್ ಗೆ ಹೋಗುವ ರಸ್ತೆಯ ಅವರ ತೋಟದಲ್ಲಿ ನೆರವೇರಿಸಲಾಗುತ್ತದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.