ಕೊರೋನಾ ಏರಿಳಿತ: ರಾಜ್ಯದಲ್ಲಿಂದು 348 ಹೊಸ ಪ್ರಕರಣ ಪತ್ತೆ; 3 ಸಾವು
ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 348 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 30,04,587ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 348 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 30,04,587ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಮೂರು ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 38,312ಕ್ಕೆ ಏರಿಕೆಯಾಗಿದೆ.
198 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 29,58, 828ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 7,418 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸೋಂಕಿನ ಪ್ರಮಾಣ ಶೇ. 0.47 ರಷ್ಟಿದ್ದು, ಮರಣ ಪ್ರಮಾಣ ಶೇ. 0.86 ರಷ್ಟಿದೆ. ಬೆಂಗಳೂರಿನಲ್ಲಿ 248 ಪ್ರಕರಣ ಪತ್ತೆಯಾಗಿದ್ದು, 88 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಓರ್ವ ಸೋಂಕಿತ ಮೃತಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


