ತಾಂತ್ರಿಕ ಸಮಸ್ಯೆ: ಬೆಂಗಳೂರಿನಲ್ಲಿ ಟೇಕ್ ಆಫ್ ಆಗದ ಮುಖ್ಯಮಂತ್ರಿ ಬೊಮ್ಮಾಯಿ ವಿಶೇಷ ವಿಮಾನ
ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಯಾಣಿಸಬೇಕಿದ್ದ ವಿಮಾನ ಟೇಕ್ ಆಫ್ ಆಗಿಲ್ಲ. ತಾಂತ್ರಿಕ ಸಮಸ್ಯೆಗಳ ಕಾರಣದಿಂದಾಗಿ...

ಬೆಂಗಳೂರು: ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಯಾಣಿಸಬೇಕಿದ್ದ ವಿಮಾನ ಟೇಕ್ ಆಫ್ ಆಗಿಲ್ಲ. ತಾಂತ್ರಿಕ ಸಮಸ್ಯೆಗಳ ಕಾರಣದಿಂದಾಗಿ ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನ ಉಳಿದುಕೊಂಡಿದೆ.
ಹುಬ್ಬಳ್ಳಿಯಲ್ಲಿ ನಡೆಯುವ ಬಿಜೆಪಿ ಕಾರ್ಯಕಾರಿಣಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೆರಳಬೇಕಾಗಿತ್ತು. ಸಿಎಂ ಅವರೊಂದಿಗೆ ಕೆಲ ಸಚಿವರು ಹುಬ್ಬಳ್ಳಿಗೆ ಪ್ರಯಾಣ ಮಾಡಬೇಕಿತ್ತು. ಆದರೆ, ವಿಶೇಷ ವಿಮಾನದಲ್ಲಿ ತಾಂತ್ರಿಕ ಸಮಸ್ಯೆಗಳು ಕಂಡುಬಂದಿದ್ದರಿಂದ ವಿಮಾನ ಟೇಕಾಫ್ ಆಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಶೇಷ ವಿಮಾನ ಕೈಕೊಟ್ಟಿದ್ದರಿಂದ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ಎಸ್.ಟಿ.ಸೋಮಶೇಖರ್ ಸದ್ಯ ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲೇ ಸಮಯ ಕಳೆಯುತ್ತಿದ್ದಾರೆ.
ವಿಮಾನ ನಿಲ್ದಾಣದ ಅಧಿಕಾರಿಗಳು ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸುವ ಸಂಬಂಧ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


