ಮಸೀದಿಗಳಲ್ಲಿ ಧ್ವನಿವರ್ಧಕ ತೆರವಿನಿಂದ ಮುಸ್ಲಿಂರ ಭಾವನೆಗಳಿಗೆ ಧಕ್ಕೆ: ಶಾಸಕ ಜಮೀರ್ ಅಹಮದ್ ಖಾನ್
ಮಸೀದಿಗಳಲ್ಲಿ ಧ್ವನಿ ವರ್ಧಕ ತೆರವು ನಿಲ್ಲಿಸಿ, ಈ ಬಗ್ಗೆ ಮೂಡಿರುವ ಗೊಂದಲ ನಿವಾರಿಸುವಂತೆ ಶಾಸಕ ಬಿ. ಝಡ್ ಜಮೀರ್ ಅಹಮದ್ ಖಾನ್ ಅವರು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಬೆಂಗಳೂರು: ಮಸೀದಿಗಳಲ್ಲಿ ಧ್ವನಿ ವರ್ಧಕ ತೆರವು ನಿಲ್ಲಿಸಿ, ಈ ಬಗ್ಗೆ ಮೂಡಿರುವ ಗೊಂದಲ ನಿವಾರಿಸುವಂತೆ ಶಾಸಕ ಬಿ. ಝಡ್ ಜಮೀರ್ ಅಹಮದ್ ಖಾನ್ ಅವರು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಜಮೀರ್ ಅಹ್ಮದ್ ಖಾನ್ ಟ್ಯಾಂಕ್ ಗಾರ್ಡನ್ ನ ಮಸೀದಿಯಿಂದ ಇತ್ತೀಚಿಗೆ ಕಾನೂನುಬಾಹಿರವಾಗಿ ಧ್ವನಿವರ್ಧಕಗಳನ್ನು ತೆರವುಗೊಳಿಸಲಾಗಿದೆ. ಇದರ ವಿರುದ್ಧ ಪ್ರವೀಣ್ ಸೂದ್ ಅವರಿಗೆ ಮನವಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ಇದರಿಂದ ಮುಸ್ಲಿಂರ ಭಾವನೆಗಳಿಗೆ ಧಕ್ಕೆಯಾಗಿದ್ದು, ಧ್ವನಿವರ್ಧಕಗಳನ್ನು ಮತ್ತೆ ಹಾಕಲು ಒತ್ತಾಯಿಸುವುದಾಗಿ ಟ್ವೀಟರ್ ನಲ್ಲಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


