ರಾಜ್ಯ

ಯಾದಗಿರಿ: ಪುರಸಭೆ ಚುನಾವಣೆಯಲ್ಲಿ ಪೆಟ್ರೋಲ್ ಹಾಕುವ ಹುಡುಗ ಪರಶುರಾಮ ಗೆಲುವು

ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶದಲ್ಲಿ ಅಚ್ಚರಿ ಎಂಬಂತೆ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕುವ ಯುವಕನೋರ್ವ ಚುನಾವಣೆ ಗೆದ್ದು ಅಚ್ಚರಿ ಮೂಡಿಸಿದ್ದಾರೆ.

ಯಾದಗಿರಿ: ಪುರಸಭೆ ಚುನಾವಣೆಯಲ್ಲಿ ಪೆಟ್ರೋಲ್ ಹಾಕುವ ಹುಡುಗ ಪರಶುರಾಮ ಗೆಲುವು
ಪೆಟ್ರೋಲ್ ಬಂಕ್ ನೌಕರ ಪರಶುರಾಮ ಗೆಲುವಿನ ಸಂಭ್ರಮ
Published On :

ಯಾದಗಿರಿ: ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶದಲ್ಲಿ ಅಚ್ಚರಿ ಎಂಬಂತೆ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕುವ ಯುವಕನೋರ್ವ ಚುನಾವಣೆ ಗೆದ್ದು ಅಚ್ಚರಿ ಮೂಡಿಸಿದ್ದಾರೆ.

ಹೌದು.. ಯಾದಗಿರಿ ಜಿಲ್ಲೆಯ ಕಕ್ಕೇರಾ ಪುರಸಭೆ ವಾರ್ಡ್ ನಂ6ರಲ್ಲಿ ಪೆಟ್ರೋಲ್ ಬಂಕ್ ನೌಕರ ಪರಶುರಾಮ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಯುವಕ ಪರಶುರಾಮ ತಮ್ಮ ವಿರುದ್ಧ ಸ್ಪರ್ಧಿಸಿದ್ದ 50 ಸ್ಪರ್ಧಿಗಳನ್ನು ಹಿಂದಿಕ್ಕಿ ಗೆಲುವು ಸಾಧಿಸಿದ್ದಾರೆ.

ಡಿ.27ರಂದು ಮತದಾನ ಪ್ರಕ್ರಿಯೆ ಮುಗಿದ ಮರುಕ್ಷಣದಿಂದಲೇ ಎರಡೂ ಪಕ್ಷದ ಅಭ್ಯರ್ಥಿಗಳ ಬೆಂಬಲಿಗರ ನಡುವೆ ಮತದಾನ ಪ್ರಮಾಣ, ಜಾತಿವಾರು ಲೆಕ್ಕಾಚಾರ, ಶೇಕಡಾವಾರು ಮತದಾನ ಸೇರಿದಂತೆ ವಿವಿಧ ವಿಷಯಗಳು ಸಾರ್ವಜನಿಕ ಮತ್ತು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿತ್ತು.

ಕಕ್ಕೇರಾ ಪುರಸಭೆಯಲ್ಲಿ ಶೇ 76.68 ಮತ್ತು ಕೆಂಭಾವಿ ಪುರಸಭೆಯಲ್ಲಿ ಶೇ 72.17 ಮತದಾನವಾಗಿತ್ತು. ಕಕ್ಕೇರಾ ‍ಪುರಸಭೆಗೆ 51 ಮಂದಿ ಸ್ಪರ್ಧಿಸಿದ್ದರು. ಈ 51 ಮಂದಿಯಲ್ಲಿ ಪೆಟ್ರೋಲ್ ಬಂಕ್ ನೌಕರ ಪರುಶುರಾಮ ಕೂಡ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.