ರಾಜ್ಯ

ಮಹಾಜನ್ ವರದಿಯೇ ಅಂತಿಮ ಎನ್ನುವುದು ಎಲ್ಲರೂ ಬಲ್ಲ ಸತ್ಯ: ಮಹಾ ಸಿಎಂ ವಿರುದ್ಧ ಬಿಎಸ್‌ವೈ ಗರಂ

"ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಉದ್ಧಟತನದ ಪ್ರದರ್ಶನವಾಗಿದೆ" ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಮಹಾಜನ್ ವರದಿಯೇ ಅಂತಿಮ ಎನ್ನುವುದು ಎಲ್ಲರೂ ಬಲ್ಲ ಸತ್ಯ: ಮಹಾ ಸಿಎಂ ವಿರುದ್ಧ ಬಿಎಸ್‌ವೈ ಗರಂ
ಬಿ.ಎಸ್. ಯಡಿಯೂರಪ್ಪ
Published On :

ಬೆಂಗಳೂರು: "ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಉದ್ಧಟತನದ ಪ್ರದರ್ಶನವಾಗಿದೆ" ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸರಣಿ ಟ್ವೀಟ್ ಮೂಲಕ ಮಹಾರಾಷ್ಟ್ರ ಸಿಎಂ ವಿರುದ್ಧ ಹರಿಯಾಯ್ದಿರುವ ಮುಖ್ಯಮಂತ್ರಿ ಯಡಿಯೂರಪ್ಪ"ಮಹಾ ಸಿಎಂ ಅವರದು  ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ" ಎಂದಿದ್ದಾರೆ.

ಮುಂದುವರಿದು, ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ. ಇದನ್ನು ನಾನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ, ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ.

"ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ." ಎಂದು ಹೇಳೀದ್ದಾರೆ.

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.