ರಾಜ್ಯ

61 ಲಕ್ಷ ಡೋಸ್; ಅತಿ ಹೆಚ್ಚು ಕೋವಿಡ್ ಲಸಿಕೆ ವಿತರಣೆ ಮಾಡಿದ ಮೆಟ್ರೋ ನಗರಗಳ ಪಟ್ಟಿಯಲ್ಲಿ ಬೆಂಗಳೂರಿಗೆ 2ನೇ ಸ್ಥಾನ

ಮಾರಕ ಕೊರೋನಾ ವೈರಸ್ ವಿರುದ್ಧದ ಲಸಿಕಾ ಅಭಿಯಾನ ಮುಂದುವರೆದಿದ್ದು, ಲಸಿಕೆ ವಿತರಣೆಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ಮಹತ್ವದ ಮೈಲುಗಲ್ಲು ಸಾಧಿಸಿದೆ.

61 ಲಕ್ಷ ಡೋಸ್; ಅತಿ ಹೆಚ್ಚು ಕೋವಿಡ್ ಲಸಿಕೆ ವಿತರಣೆ ಮಾಡಿದ ಮೆಟ್ರೋ ನಗರಗಳ ಪಟ್ಟಿಯಲ್ಲಿ ಬೆಂಗಳೂರಿಗೆ 2ನೇ ಸ್ಥಾನ
ಉಚಿತ ಸಾಮೂಹಿಕ ಲಸಿಕೆ ಅಭಿಯಾನಕ್ಕೆ ಚಾಲನೆ
Published On :

ಬೆಂಗಳೂರು: ಮಾರಕ ಕೊರೋನಾ ವೈರಸ್ ವಿರುದ್ಧದ ಲಸಿಕಾ ಅಭಿಯಾನ ಮುಂದುವರೆದಿದ್ದು, ಲಸಿಕೆ ವಿತರಣೆಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ಮಹತ್ವದ ಮೈಲುಗಲ್ಲು ಸಾಧಿಸಿದೆ.

ವ್ಯಾಕ್ಸಿನೇಷನ್ ಅಭಿಯಾನ ಪ್ರಾರಂಭವಾದಾಗಿನಿಂದ, ಬೆಂಗಳೂರು ನಗರ ಜಿಲ್ಲೆಯಲ್ಲಿ 61 ಲಕ್ಷಕ್ಕೂ ಅಧಿಕ ಡೋಸ್ ಲಸಿಕೆ ವಿತರಣೆ ಮಾಡಲಾಗಿದ್ದು, ಇದೇ ದೇಶದಲ್ಲೇ 2ನೇ ಗರಿಷ್ಠ ಪ್ರಮಾಣವಾಗಿದೆ. ರಾಜ್ಯ ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯಂತೆ ಬುಧವಾರದ ವೇಳೆಗೆ ಬೆಂಗಳೂರಿನಲ್ಲಿ 61,43,456  ಡೋಸ್‌ ಲಸಿಕೆಗಳನ್ನು ನೀಡಿದೆ. ಇದೇ ದೇಶದಲ್ಲಿ ಅತೀ ಹೆಚ್ಚು ಲಸಿಕೆ ವಿತರಣೆ ಮಾಡಿದ ಮೆಟ್ರೋ ನಗರಗಳ ಪೈಕಿ 2ನೇ ಗರಿಷ್ಠ ಪ್ರಮಾಣವಾಗಿದೆ.  

Story image

ಈ ಪಟ್ಟಿಯ ಮೊದಲ ಸ್ಥಾನದಲ್ಲಿ ರಾಷ್ಟ್ರ ರಾಜಧಾನಿ ದೆಹಲಿ ಇದ್ದು ಅಲ್ಲಿ ಈ ವರೆಗೂ 78,91,204 ಡೋಸ್ ಲಸಿಕೆ ವಿತರಣೆ ಮಾಲಾಗಿದೆ. ನಂತರದ ಸ್ಥಾನದಲ್ಲಿ ಬೆಂಗಳೂರು ಇದ್ದು, 55,94,591 ಡೋಸ್ ಲಸಿಕೆ ವಿತರಣೆ ಮಾಡಿರುವ ಮುಂಬೈ ಮೂರನೇ ಸ್ಥಾನದಲ್ಲಿದೆ. ಬಂಗಾಳ ರಾಜಧಾನಿ ಕೋಲ್ಕತಾ 4ನೇ  ಸ್ಥಾನದಲ್ಲಿದ್ದು, ಇಲ್ಲಿ 32,50,250 ಡೋಲ್ ಲಸಿಕೆಗಳನ್ನು ವಿತರಣೆ ಮಾಡಲಾಗಿದೆ.

ಲಸಿಕೆ ನೀಡಿಕೆ ಪ್ರಮಾಣ ಗಣನೀಯ ಏರಿಕೆ
ಇನ್ನು ಬೆಂಗಳೂರು ನಗರದಲ್ಲಿ ದಿನ ಕಳೆದಂತೆ ಲಸಿಕೆ ವಿತರಣಾ ಪ್ರಮಾಣ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಜನರೇ ಸ್ವಇಚ್ಛೆಯಿಂದ ಲಸಿಕೆ ಪಡೆಯಲು ಮುಂದಾಗುತ್ತಿದ್ದಾರೆ. ಆದರೆ ಬೇಡಿಕೆಗೆ ಅನುಗುಣವಾಗಿ ನಗರಕ್ಕೆ ಲಸಿಕೆ ಪೂರೈಕೆಯಾಗುತ್ತಿಲ್ಲ ಎಂಬ ಆರೋಪ ಕೂಡ ಕೇಳಿಬರುತ್ತಿದೆ. ಸಾಕಷ್ಟು ಲಸಿಕಾ  ಕೇಂದ್ರಗಳಲ್ಲಿ ಸರತಿ ಸಾಲಲ್ಲಿ ಜನ ನಿಂತರೂ ಲಸಿಕೆ ಇಲ್ಲದೆ ವಾಪಸ್ ಆದ ಘಟನೆಗಳು ಕೂಡ ನಡೆದಿವೆ. ಈ ಬಗ್ಗೆ ಮಾತನಾಡಿರುವ ಬಿಬಿಎಂಪಿ ಅಧಿಕಾರಿಗಳು, ಇಲ್ಲಿಯವರೆಗೆ, 51.3 ಲಕ್ಷ ಜನರು ತಮ್ಮ ಮೊದಲ ಡೋಸ್ ಲಸಿಕೆ ಪಡೆದಿದ್ದು, 9.3 ಲಕ್ಷ ಜನರಿಗೆ ಸಂಪೂರ್ಣ ಎರಡೂ ಡೋಸ್ ನೀಡಲಾಗಿದೆ ಎಂದು  ಹೇಳಿದರು.

ಅನೇಕ ಸಂಘ ಸಂಸ್ಥೆಗಳು ನಗರದಲ್ಲಿ ವ್ಯಾಕ್ಸಿನೇಷನ್ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಈ ಪ್ರಕ್ರಿಯೆಗೆ ಜನರ ಉತ್ತಮ ಸ್ಪಂದನೆ ಕೂಡ ಉತ್ತೇಜನ ನೀಡಿದೆ. ಅಲ್ಲದೆ, ನಿವಾಸಿಗಳ ಕಲ್ಯಾಣ ಸಂಘಗಳು ಖಾಸಗಿ ಆಸ್ಪತ್ರೆಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತಿವೆ. ಈ ಮೊದಲು ಲಸಿಕಾ ಕಾರ್ಯಕ್ರಮಕ್ಕೆ ಜನ  ಸ್ಪಂದನೆ ಕಳಪೆಯಾಗಿತ್ತು. ಆದರೆ ಈಗ, ವ್ಯಾಕ್ಸಿನೇಷನ್ಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಹೊರಗೆ ದೀರ್ಘ ಸರತಿ ಸಾಲುಗಳನ್ನು ನಾವು ನೋಡುತ್ತಿದ್ದೇವೆ ಎಂದು ಪಿಎಚ್‌ಸಿಯ ವೈದ್ಯರೊಬ್ಬರು ಹೇಳಿದರು. ಇದಲ್ಲದೆ, ಬಿಬಿಎಂಪಿ ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸುತ್ತಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ  (ಆರೋಗ್ಯ) ರಂದೀಪ್ ಡಿ ತಿಳಿಸಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.