ಕೋವಿಡ್-19: ಬೆಂಗಳೂರಿನಲ್ಲಿ 593 ಸೇರಿ ರಾಜ್ಯದಲ್ಲಿಂದು 2984 ಹೊಸ ಪ್ರಕರಣ, 14337 ಚೇತರಿಕೆ, 88 ಸಾವು
ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 2984 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2849997ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 2984 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2849997ಕ್ಕೆ ಏರಿಕೆಯಾಗಿದೆ.
14337 ಸೋಂಕಿತರು ವಿವಿಧ ಆಸ್ಪತ್ರೆಗಳಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 2760881ಕ್ಕೆ ಏರಿಕೆಯಾಗಿದೆ.
ಇಂದು 88 ಸೋಂಕಿತರು ಮೃತಪಟ್ಟಿದ್ದಾರೆ. ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 35222ಕ್ಕೆ ಏರಿಕೆಯಾಗಿದೆ. ಸದ್ಯ ರಾಜ್ಯದಲ್ಲಿ 53871 ಸಕ್ರಿಯ ಪ್ರಕರಣಗಳಿವೆ. ಖಚಿತ ಸೋಂಕಿನ ಶೇಕಡವಾರು ಪ್ರಮಾಣ ಶೇ. 1.92, ಮರಣ ಪ್ರಮಾಣ ಶೇ. 2.94 ರಷ್ಟಿದೆ.
ಬೆಂಗಳೂರಿನಲ್ಲಿ 593 ಹೊಸ ಪ್ರಕರಣಗಳು ದೃಢಪಟ್ಟಿದೆ.ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1214528ಕ್ಕೆ ಏರಿಕೆಯಾಗಿದೆ. ಇಂದು 10674 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟಾರೇ ಗುಣಮುಖರಾದವರ ಸಂಖ್ಯೆ 1175748ಕ್ಕೆ ಏರಿಕೆಯಾಗಿದೆ. ಇಂದು 11 ಮಂದಿ ಸಾವನ್ನಪ್ಪಿದ್ದಾರೆ. ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 15655ಕ್ಕೆ ಏರಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


