ಬೆಂಗಳೂರಿನಲ್ಲಿ ಟಾಯ್ಲೆಟ್ಸ್ ಕೊರತೆ; ಒಂದು ಸಾವಿರ ಜನಸಂಖ್ಯೆಗೆ ಒಂದರಂತೆಯೂ ಸಾರ್ವಜನಿಕ ಶೌಚಾಲಯ ಇಲ್ಲ: ವರದಿ
ಚೆನ್ನೈ, ಹೈದರಾಬಾದ್ ಮತ್ತು ಅಹಮದಾಬಾದ್ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಸಾರ್ವಜನಿಕ ಶೌಚಾಲಯಗಳ ಸಂಖ್ಯೆ ಕಡಿಮೆ ಇವೆ’ ಎಂದು ಬೆಂಗಳೂರು ನೈರ್ಮಲ್ಯ ಯೋಜನಾ ವರದಿ ತಿಳಿಸಿದೆ.

ಬೆಂಗಳೂರು: ಚೆನ್ನೈ, ಹೈದರಾಬಾದ್ ಮತ್ತು ಅಹಮದಾಬಾದ್ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಸಾರ್ವಜನಿಕ ಶೌಚಾಲಯಗಳ ಸಂಖ್ಯೆ ಕಡಿಮೆ ಇವೆ’ ಎಂದು ಬೆಂಗಳೂರು ನೈರ್ಮಲ್ಯ ಯೋಜನಾ ವರದಿ ತಿಳಿಸಿದೆ.
ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಲೋಕಲ್ ಸೆಲ್ಫ್ ಗವರ್ನಮೆಂಟ್ ಸಂಸ್ಥೆ ಸಲ್ಲಿಸಿರುವ ಈ ವರದಿಯನ್ನು ಹೈಕೋರ್ಟ್‌ಗೆ ಬಿಬಿಎಂಪಿ ಸಲ್ಲಿಸಿತು. ನಗರದಲ್ಲಿ ಅಗತ್ಯ ಇರುವ ಸಾರ್ವಜನಿಕ ಶೌಚಾಲಯಗಳ ಬಗ್ಗೆ ವರದಿ ಸಿದ್ಧಪಡಿಸುವ ಜವಾಬ್ದಾರಿಯನ್ನು ಈ ಸಂಸ್ಥೆಗೆ ಬಿಬಿಎಂಪಿ ವಹಿಸಿತ್ತು.
ಒಂದು ಸಾವಿರ ಜನಸಂಖ್ಯೆಗೆ ಒಂದರಂತೆಯೂ ಸಾರ್ವಜನಿಕ ಶೌಚಾಲಯ ಇಲ್ಲ. ಚೆನ್ನೈ, ಹೈದರಾಬಾದ್, ಅಹಮದಾಬಾದ್‌ನಲ್ಲಿ ಪ್ರತಿ ಚದರ ಕಿಲೋ ಮೀಟರ್, ಪ್ರತಿ ವಾರ್ಡ್‌ಗಳಲ್ಲಿ ಇರುವ ಸಾರ್ವಜನಿಕ ಶೌಚಾಲಯಗಳ ಸಂಖ್ಯೆ ಹೋಲಿಸಿದರೆ ಬೆಂಗಳೂರಿನಲ್ಲಿ ಕಡಿಮೆ ಸಂಖ್ಯೆಯ ಶೌಚಾಲಯಗಳಿವೆ’ ಎಂದು ವರದಿ ಹೇಳಿದೆ.
ಕೊಳಚೆ ಪ್ರದೇಶಗಳಿಗೆ ಹೆಚ್ಚಿನ ಸಮುದಾಯ ಶೌಚಾಲಯಗಳು ಅಗತ್ಯ ಇವೆ. ಇರುವ ಶೌಚಾಲಯಗಳಲ್ಲಿ ನಿರ್ವಹಣೆ ಇಲ್ಲದೆ ಬಳಕೆಗೆ ಸಾಧ್ಯವಾಗದ ಸ್ಥಿತಿಯಲ್ಲಿವೆ. ನಿರ್ವಹಣೆ ಇಲ್ಲದ ಕಾರಣ ಶೌಚಾಲಯಗಳ ಬಳಕೆಯ ಮೇಲೂ ಪರಿಣಾಮ ಬೀರುತ್ತಿದೆ. ಬೆಂಗಳೂರಿಗೆ ಆಗಾಗ ಬಂದು ಹೋಗುವ ಜನಸಂಖ್ಯೆ ಶೇ 15 ರ ದರದಲ್ಲಿ ಬೆಳೆಯುತ್ತಿದೆ. ಮಾರುಕಟ್ಟೆ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ವಾಣಿಜ್ಯ ಪ್ರದೇಶಗಳಲ್ಲಿ ಹೆಚ್ಚಿನ ಶೌಚಾಲಯಗಳ ಅಗತ್ಯವಿದೆ’ ಎಂದು ವರದಿ ತಿಳಿಸಿದೆ.
ವರದಿ ಅವಲೋಕಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ವಾರ್ಡ್‌ವಾರು ಶೌಚಾಲಯಗಳ ಅಗತ್ಯದ ಬಗ್ಗೆ ವರದಿಯಲ್ಲಿ ಉಲ್ಲೇಖ ಇಲ್ಲದಿದ್ದರೂ, ಪ್ರಮುಖ ವಿಷಯಗಳನ್ನು ಎತ್ತಿ ಹಿಡಿದಿದೆ. ಅಗತ್ಯ ಇರುವ ಕಡೆಗಳಲ್ಲಿ ಶೌಚಾಲಯ ನಿರ್ಮಾಣ, ನಿರ್ವಹಣೆ ಗುಣಮಟ್ಟ ಸುಧಾರಣೆ ಬಗ್ಗೆ ತಕ್ಷಣ ಗಮನ ಹರಿಸಬೇಕು. ವರದಿಯಲ್ಲಿರುವ ಶಿಫಾರಸುಗಳ ಅನುಷ್ಠಾನ ಸಂಬಂಧ ಅನುಸರಣಾ ವರದಿಯನ್ನು ಆಗಸ್ಟ್ 13ರೊಳಗೆ ಸಲ್ಲಿಸಬೇಕು’ ಎಂದು ಬಿಬಿಎಂಪಿಗೆ ನಿರ್ದೇಶನ ನೀಡಿತು. ನಗರದಲ್ಲಿ ಶೌಚಾಲಯ ಸಮಸ್ಯೆಗಳ ಕುರಿತು ಲಿಟ್ಜ್‌ಕಿಟ್ ಫೌಂಡೇಷನ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.
ಕಮರ್ಷಿಯಲ್ ಹಾಟ್‌ಸ್ಪಾಟ್‌ಗಳು ಹೆಚ್ಚು ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಬೇಕು, ನವೀನ ವಿನ್ಯಾಸಗಳು ಭೂಮಿಯ ಲಭ್ಯತೆಯು ನಿರ್ಬಂಧವಾಗಿರುವ ಎನ್ಫುಟ್‌ಪಾತ್‌ಗಳಲ್ಲಿ ಅವುಗಳನ್ನು ಸ್ಥಾಪಿಸಲು ಕಡಿಮೆ ಸ್ಥಳಾವಕಾಶ ಬೇಕಾಗುತ್ತದೆ. 4 ವಲಯಗಳಲ್ಲಿ (ಪೂರ್ವ, ಪಶ್ಚಿಮ, ದಕ್ಷಿಣ ಮತ್ತು ಯಲಹಂಕ) ಕೇವಲ 32 ಸಮುದಾಯ ಶೌಚಾಲಯಗಳು ಕೇಂದ್ರೀಕೃತವಾಗಿವೆ, ಇದು ಕೇವಲ 10,000 ಕೊಳೆಗೇರಿ ಜನಸಂಖ್ಯೆಯ ಅಗತ್ಯ ಪೂರೈಸುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


