ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ: 20.89 ಲಕ್ಷ ರೂ. ಮೌಲ್ಯದ ಚಿನ್ನ ವಶ
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.

ಮಂಗಳೂರು: ನಗರದ ಬಜ್ಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.
ಕಾಸರಗೋಡಿನ ಪ್ರಯಾಣಿಕರೊಬ್ಬರು ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ತಪಾಸಣೆ ವೇಳೆ ಈತ 430 ಗ್ರಾಂ ತೂಕದ ಚಿನ್ನವನ್ನು ಪೌಡರ್ ಅನ್ನು ಗುದನಾಳದಲ್ಲಿಟ್ಟು ಸಾಗಿಸುತ್ತಿರುವುದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಂಧಿತ ಪ್ರಯಾಣಿಕನಿಂದ ಒಟ್ಟು 20.89 ಲಕ್ಷ ರೂ ಮೌಲ್ಯದ ಅಕ್ರಮ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಸ್ಟಮ್ಸ್‌ನ ಉಪ ಆಯುಕ್ತ ಪ್ರವೀಣ್ ಕಂಡಿ, ಅಧಿಕಾರಿಗಳಾದ ರಾಕೇಶ್‌ಕುಮಾರ್, ವಿಕಾಸ್‌ಕುಮಾರ್, ಬಿಕ್ರಮ್ ಚಕ್ರವರ್ತಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


