ಕನ್ನಡ ಪುಸ್ತಕ ಪ್ರಾಧಿಕಾರ ವಾರ್ಷಿಕ ಪ್ರಶಸ್ತಿ: ಸುಧೀಂದ್ರ ಹಾಲ್ದೊಡ್ಡೇರಿಗೆ ಅನುಪಮ ನಿರಂಜನ ವೈದ್ಯಕೀಯ, ವಿಜ್ಞಾನ ಸಾಹಿತ್ಯ ಪುರಸ್ಕಾರ
ಕನ್ನಡ ಪುಸ್ತಕ ಪ್ರಾಧಿಕಾರದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದ್ದು, ಇಂದು ನಿಧನರಾದ ಡಿಆರ್ ಡಿಒ ಮಾಜಿ ವಿಜ್ಞಾನಿ, ಪ್ರಸಿದ್ಧ ವಿಜ್ಞಾನ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ಅವರಿಗೆ ಅನುಪಮ ನಿರಂಜನ ವೈದ್ಯಕೀಯ, ವಿಜ್ಞಾನ ಸಾಹಿತ್ಯ ಪುರಸ್ಕಾರ ಲಭಿಸಿದೆ.

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದ್ದು, ಇಂದು ನಿಧನರಾದ ಡಿಆರ್ ಡಿಒ ಮಾಜಿ ವಿಜ್ಞಾನಿ, ಪ್ರಸಿದ್ಧ ವಿಜ್ಞಾನ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ಅವರಿಗೆ ಅನುಪಮ ನಿರಂಜನ ವೈದ್ಯಕೀಯ, ವಿಜ್ಞಾನ ಸಾಹಿತ್ಯ ಪುರಸ್ಕಾರ ಲಭಿಸಿದೆ.
ಪ್ರಶಸ್ತಿಯು ರೂ.25,000 ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿರಲಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಹೇಳಿದ್ದಾರೆ.
ಇದರೊಂದಿಗೆ ಹಿರಿಯ ಸಾಹಿತಿ, ಸಂಶೋಧಕ ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರೀ ಅವರಿಗೆ ಡಾ. ಎಂ.ಎಂ ಕಲಬುರ್ಗಿ ಮಾನವಿಕ ಅಧ್ಯಯನ ಪುರಕ್ಸಾರ, ಪುಸ್ತಕ ಪ್ರಾಧಿಕಾರ ನೀಡುವ ಅತ್ಯುತ್ತಮ ಪ್ರಕಾಶನ ಪ್ರಶಸ್ತಿಗೆ ಹುಬ್ಬಳ್ಳಿಯ ಸಾಹಿತ್ಯ ಪ್ರಕಾಶನ ಆಯ್ಕೆಯಾಗಿದೆ.
ಇನ್ನು ಇತ್ತೀಚೆಗೆ ಬೆಂಕಿಗಾಹುತಿಯಾಗಿದ್ದ ಸಾರ್ವಜನಿಕ ಗ್ರಂಥಾಲಯದ ನಿರ್ಮಾತೃ, ಅಪ್ಪಟ ಪುಸ್ತಕ ಪ್ರೇಮಿ ಮೈಸೂರಿನ ಸಯ್ಯದ್ ಇಸಾಕ್ ಅವರಿಗೆ ಡಾ. ಜಿ.ಪಿ ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ ಲಭಿಸಿದೆ.
ಅತ್ಯುತ್ತಮ ಪ್ರಕಾಶನ ಪ್ರಶಸ್ತಿ ರೂ. 1 ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ, ಡಾ. ಎಂ.ಎಂ ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ ರೂ. 75,000 ನಗದು ಹಾಗೂ ಪ್ರಶಸ್ತಿ ಫಲಕ, ಡಾ. ಜಿ.ಪಿ ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ ರೂ.50,000 ನಗದು ಹಾಗೂ ಪ್ರಶಸ್ತಿ ಫಲಕ ಹೊಂದಿರಲಿದೆ ಎಂದು ನಂದೀಶ್ ಹಂಚೆ ಮಾಹಿತಿ ನೀಡಿದ್ದಾರೆ.
ಇನ್ನು ಪುಸ್ತಕ ಬಹುಮಾನಗಳ ಆಯ್ಕೆ ಪ್ರಕ್ರಿಯೆ ಇನ್ನೂ ನಡೆಯುತ್ತಿದ್ದು ಶೀಘ್ರವೇ ಪಟ್ಟಿ ಬಿಡುಗಡೆ ಆಗಲಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


