45 ದಿನಗಳ ರಾಜ್ಯವ್ಯಾಪಿ ಜೀವ ವೈವಿಧ್ಯ ಜಾಗೃತಿ ಅಭಿಯಾನಕ್ಕೆ ಸಿಎಂ ಯಡಿಯೂರಪ್ಪ ಚಾಲನೆ
ಜೀವ ವೈವಿಧ್ಯ ಮಂಡಳಿ ಆಯೋಜಿಸಿರುವ 45 ದಿನಗಳ ರಾಜ್ಯವ್ಯಾಪಿ ಜೀವ ವೈವಿಧ್ಯ ಜಾಗೃತಿ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಚಾಲನೆ ನೀಡಿದ್ದಾರೆ.

ಬೆಂಗಳೂರು: ಜೀವ ವೈವಿಧ್ಯ ಮಂಡಳಿ ಆಯೋಜಿಸಿರುವ 45 ದಿನಗಳ ರಾಜ್ಯವ್ಯಾಪಿ ಜೀವ ವೈವಿಧ್ಯ ಜಾಗೃತಿ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಚಾಲನೆ ನೀಡಿದ್ದಾರೆ.
ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿರುವ ಯಡಿಯೂರಪ್ಪ ಅವರು, ಕನ್ನಡನಾಡಿನ ಕೆರೆ, ನದಿ, ಕಣಿವೆಗಳು, ನಿಸರ್ಗ ಸಂಪತ್ತು ಸಂರಕ್ಷಣೆಗೆ ಸ್ಥಳೀಯ ಜನರೇ ಮುಂದಾಗಬೇಕು. ಈ ಬಗ್ಗೆ ಜಾಗೃತಿ ಉಂಟು ಮಾಡಲು ಜೀವ ವೈವಿಧ್ಯ ಮಂಡಳಿ ರಚನಾತ್ಮಕ ಆಂದೋಲನ ಕೈಗೆತ್ತಿಕೊಂಡಿದೆ ಎಂದು ಹೇಳಿದ್ದಾರೆ,
ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಮಾತನಾಡಿ, ಜೀವ ವೈವಿಧ್ಯ ಜಾಗೃತಿ ಅಭಿಯಾನವನ್ನು ಜು.1ರಿಂದ ಆ.15ರವರೆಗೆ ರಾಜ್ಯದೆಲ್ಲೆಡೆ ನಡೆಸಲು ಉದ್ದೇಶಿಸಲಾಗಿದೆ. ರಾಜ್ಯದಲ್ಲಿ ತಳ ಮಟ್ಟದಲ್ಲಿ ಪಂಚಾಯತ್‍ಗಳ, ನಗರ ಸಂಸ್ಥೆಗಳಲ್ಲಿ ರಚಿಸಲಾಗಿರುವ ಜೀವ ವೈವಿಧ್ಯ ಸಮಿತಿಗಳನ್ನು ಸಕ್ರಿಯಗೊಳಿಸಬೇಕು. ಸ್ಥಾನಿಕವಾಗಿ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಮಟ್ಟದಲ್ಲಿನ ನಿಸರ್ಗ ಸಂಪತ್ತಿನ ಪರಿಸ್ಥಿತಿಯ ಅವಲೋಕನವಾಗಬೇಕು. ಕೆರೆಗಳ ಪುನಶ್ಚೇತನ, ವನಗಳ ಪುನಶ್ಚೇತನ ಕಾರ್ಯಗಳಲ್ಲಿ ಜನತೆ ಪಾಲ್ಗೊಳ್ಳಬೇಕು ಎಂಬ ಉದ್ದೇಶದಿಂದ ಜೀವ ವೈವಿಧ್ಯ ಜಾಗೃತಿ ಅಭಿಯಾನವನ್ನು ರೂಪಿಸಲಾಗಿದೆ ಎಂದು ತಿಳಿಸಿದರು.
ಸಂಘ-ಸಂಸ್ಥೆ, ಶಿಕ್ಷಣ ಸಂಸ್ಥೆಗಳು ನಗರ ಸಭೆಗಳು, ಪಂಚಾಯತ್‍ರಾಜ್ ಸಂಸ್ಥೆಗಳ ಮೂಲಕ ವಿಧಾಯಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ವೃಕ್ಷಾರೋಪಣ, ಕೆರೆಗಳ ಸಮೀಕ್ಷೆ, ಸಾಧಕರಿಗೆ ಸಂಮಾನ, ಸ್ಪರ್ಧೆ, ಸಸಿಸಂತೆ, ಜೀವ ವೈವಿಧ್ಯ ದಾಖಲಾತಿ ವರಿದಿಗಳ ಬಿಡುಗಡೆ ಇತ್ಯಾದಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತದೆ. ಅರಣ್ಯ ಇಲಾಖೆ, ಪಂಚಾಯತ್‍ರಾಜ್ ಇಲಾಖೆ, ನಗರ ಅಭಿವೃದ್ಧಿ ಇಲಾಖೆ ಇವರ ಸಹಯೋಗದಲ್ಲಿ ಅಭಿಯಾನ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


