ರಾಜ್ಯ

ಗೌರಿ ಲಂಕೇಶ್ ಹತ್ಯೆ ಕೇಸ್: ಯಾವುದೇ ಪ್ರಭಾವಕ್ಕೊಳಗಾಗದೆ ಜಾಮೀನಿನ ಕುರಿತು ನಿರ್ಧರಿಸಿ- ಸುಪ್ರೀಂ ಕೋರ್ಟ್

ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದ ಆರೋಪಿಗಯೊಬ್ಬರ ಜಾಮೀನು ಅರ್ಜಿಯ ವಿಚಾರದಲ್ಲಿ ಯಾರಿಂದಲೂ ಪ್ರಭಾವಿತರಾಗದೆ ತೀರ್ಪು ನೀಡುವಂತೆ ಸುಪ್ರೀಂಕೋರ್ಟ್ ಕರ್ನಾಟಕ ಹೈಕೋರ್ಟ್‌ಗೆ ಸೂಚಿಸಿದೆ.

ಗೌರಿ ಲಂಕೇಶ್ ಹತ್ಯೆ ಕೇಸ್: ಯಾವುದೇ ಪ್ರಭಾವಕ್ಕೊಳಗಾಗದೆ ಜಾಮೀನಿನ ಕುರಿತು ನಿರ್ಧರಿಸಿ- ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Published On :

ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದ ಆರೋಪಿಗಯೊಬ್ಬರ ಜಾಮೀನು ಅರ್ಜಿಯ ವಿಚಾರದಲ್ಲಿ ಯಾರಿಂದಲೂ ಪ್ರಭಾವಿತರಾಗದೆ ತೀರ್ಪು ನೀಡುವಂತೆ ಸುಪ್ರೀಂಕೋರ್ಟ್ ಕರ್ನಾಟಕ ಹೈಕೋರ್ಟ್‌ಗೆ ಸೂಚಿಸಿದೆ.

ಈ ಪ್ರಕರಣದಲ್ಲಿ ಆರೋಪಿ ಮೋಹನ್ ನಾಯಕ್ ವಿರುದ್ಧ ಸಂಘಟಿತ ಅಪರಾಧ ಆರೋಪ ಕೈಬಿಡುವ ಬಗ್ಗೆ ಹತ್ಯೆಗೀಡಾದ ಪತ್ರಕರ್ತೆಯ ಸಹೋದರಿ ಸಲ್ಲಿಸಿದ್ದ ಮನವಿಗೆ  ಗೆ ಉನ್ನತ ನ್ಯಾಯಾಲಯ ಕರ್ನಾಟಕ ಸರ್ಕಾರದಿಂದ ಪ್ರತಿಕ್ರಿಯೆ ಕೋರಿದೆ.

ಹೈಕೋರ್ಟ್ ಆದೇಶದ ವಿರುದ್ಧ ಲಂಕೇಶ್ ಅವರ ಸಹೋದರಿ ಕವಿತಾ ಲಂಕೇಶ್ ಅವರು ಸಲ್ಲಿಸಿದ್ದ ಮೇಲ್ಮನವಿಯ ಬಗ್ಗೆ ಪ್ರತಿಕ್ರಿಯೆ ಕೋರಿ ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ನೇತೃತ್ವದ ಮೂವರು ನ್ಯಾಯಾಧೀಶರ ಪೀಠ ಕರ್ನಾಟಕ ಸರ್ಕಾರ ಮತ್ತು ಇತರರಿಗೆ ನೋಟಿಸ್ ನೀಡಿದೆ.

"ಪ್ರತಿವಾದಿ ಸಂಖ್ಯೆ 6 ರ ಸಲಹೆಯನ್ನು ಕೇಳಿದ ನಂತರ, ಸದ್ಯಕ್ಕೆ, ಹೈಕೋರ್ಟ್‌ನ ಮುಂದೆ ಪ್ರತಿವಾದಿ ನಂ. 6 ರವರು ಸಲ್ಲಿಸಿದ ಜಾಮೀನು ಅರ್ಜಿಯನ್ನು ಆಕ್ಷೇಪಾರ್ಹ ಆದೇಶದಿಂದ ಪ್ರಭಾವಿಸದೆ ತೀರ್ಮಾನಿಸಲಾಗಿದೆ ಎಂದು ನಾವು ಗಮನಿಸಿದ್ದೇವೆ. "ಎಂದು ನ್ಯಾಯಮೂರ್ತಿಗಳಾದ ದಿನೇಶ್ ಮಹೇಶ್ವರಿ ಮತ್ತು ಅನಿರುದ್ಧ ಬೋಸ್ ಅವರನ್ನೂ ಒಳಗೊಂಡ ನ್ಯಾಯಪೀಠ ಹೇಳಿದೆ.

ಈ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ಮುಂದಿನ ವಿಚಾರಣೆ ಜುಲೈ 15ಕ್ಕೆ ನಡೆಯಲಿದೆ.

ಗೌರಿ ಲಂಕೇಶ್ ಸೋದರಿ ಕವಿತಾ ಸಲ್ಲಿಸಿದ್ದ ಮೇಲ್ಮನವಿಯ ಪ್ರಕಾರ, ನಾಯಕ್ ಜಾಮೀನು ಕೋರಲು ಏಪ್ರಿಲ್ 22 ರಂದು ತಮ್ಮ ವಿರುದ್ಧದ ಆರೋಪಗಳನ್ನು ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್‌ನ ಆಕ್ಷೇಪಾರ್ಹ ತೀರ್ಪನ್ನು ಉಲ್ಲೇಖಿಸಿದ್ದಾರೆ.  ಸೆಪ್ಟೆಂಬರ್ 5, 2017 ರ ರಾತ್ರಿ 8ರ ಸುಮಾರಿಗೆ ರಾಜರಾಜೇಶ್ವರಿ ನಗರ ಮನೆಯ ಮುಂಭಾಗದಲ್ಲಿ ಗೌರಿ ಲಂಕೇಶ್ ಹತ್ಯೆ ನಡೆದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.