ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ವೀಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಕಲ್ಪಿಸಿ: ಸರ್ಕಾರಕ್ಕೆ 'ಹೈ' ಸೂಚನೆ
ರಾಜ್ಯದ ಎಲ್ಲಾ ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ ಉನ್ನತ ತಂತ್ರಜ್ಞಾನ ಆಧಾರಿತ ವೀಡಿಯೋ ಕಾನ್ಫರೆನ್ಸ್ ವಿಚಾರಣಾ ವ್ಯವಸ್ಥೆ ಒದಗಿಸುವ ಅಗತ್ಯ ಇದೆ ಎಂದು ಹೈಕೋರ್ಟ್ ಶನಿವಾರ ಹೇಳಿದೆ.

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ ಉನ್ನತ ತಂತ್ರಜ್ಞಾನ ಆಧಾರಿತ ವೀಡಿಯೋ ಕಾನ್ಫರೆನ್ಸ್ ವಿಚಾರಣಾ ವ್ಯವಸ್ಥೆ ಒದಗಿಸುವ ಅಗತ್ಯ ಇದೆ ಎಂದು ಹೈಕೋರ್ಟ್ ಶನಿವಾರ ಹೇಳಿದೆ.
ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಹಾಗೂ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ನ್ಯಾಯಪೀಠ, ‘ಹೈಕೋರ್ಟ್ ಆಡಳಿತ ಸಲ್ಲಿಸಿರುವ ಪ್ರಸ್ತಾವನೆಯನ್ನು ಕೂಡಲೇ ಪರಿಗಣಿಸಬೇಕು’ ಎಂದು ಆದೇಶಿಸಿತು.
ಕೋವಿಡ್ 3ನೇ ಅಲೆ ಸಾಧ್ಯತೆ ಬಗ್ಗೆ ಚರ್ಚೆಗಳು ನಡೆಯುತ್ತಿವೆ. 3ನೇ ಅಲೆ ಎದುರಿಸಲು ನ್ಯಾಯಾಂಗ ವ್ಯವಸ್ಥೆ ಕೂಡ ಸಿದ್ಧವಾಗಿರಬೇಕಾಗುತ್ತದೆ. ಹಾಗಾಗಿ, ಸುಸಜ್ಜಿತ ವಿಡಿಯೊ ಕಾನ್ಫರೆನ್ಸ್ ವ್ಯವಸ್ಥೆ ಕಲ್ಪಿಸಬೇಕಾಗುತ್ತದೆ ಎಂದು ಹೇಳಿತು.
ಎಲ್ಲಾ ನ್ಯಾಯಾಲಯಗಳಿಗೆ ಪರವಾನಗಿ ಪಡೆದ ಜೂಮ್ ಆ್ಯಪ್ ಒದಗಿಸಬೇಕು. ಈ ವ್ಯವಸ್ಥೆ ಹೈಕೋರ್ಟ್ ಪೀಠಗಳಲ್ಲಿ ಈ ವ್ಯವಸ್ಥೆ ಯಶಸ್ವಿಯಾಗಿ ಬಳಕೆಯಾಗುತ್ತಿದೆ. ಎಲ್ಲಾ ಜಿಲ್ಲೆಯಲ್ಲೂ ಸುಸಜ್ಜಿತ ವ್ಯವಸ್ಥೆ ಕಲ್ಪಿಸುವ ಸಂಬಂಧ ಪ್ರಸ್ತಾವನೆ ಸಿದ್ಧಪಡಿಸಲು ಹೈಕೊರ್ಟ್‌ನ ಕಂಪ್ಯೂಟರ್ ಸಮಿತಿಗೆ ಪೀಠ ನಿರ್ದೇಶನ ನೀಡಿತು.
‘ಎಲ್ಲಾ ನ್ಯಾಯಾಲಯಗಳಿಗೆ ಉತ್ತಮವಾದ ವಿಡಿಯೊ ಕಾನ್ಫರೆನ್ಸ್ ವ್ಯವಸ್ಥೆ ಕಲ್ಪಿಸಲಾಗಿದೆಯೇ ಎಂಬುದನ್ನು ಸರ್ಕಾರ ಖಚಿತಪಡಿಸಿಕೊಳ್ಳಬೇಕು. ಆ ಮೂಲಕ ರಾಜ್ಯದ ನ್ಯಾಯಾಲಯಗಳು ಇತರ ರಾಜ್ಯಗಳ ನ್ಯಾಯಾಲಯಗಳಿಗೆ ಪಾರದರ್ಶಕ ಆಗಬಹುದು’ ಎಂದು ಪೀಠ ಅಭಿಪ್ರಾಯಪಟ್ಟಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


