ಮಂಡ್ಯ: ಮದುವೆಯಾದರೆ ಬೇರೆಯಾಗುವ ಆತಂಕ, ಅವಳಿ ಸೋದರಿಯರು ಆತ್ಮಹತ್ಯೆ!
ಮದುವೆಯಾದರೆ ಬೇರೆ ಬೇರೆಯಾಗುತ್ತೇವೆ ಎಂಬ ಆತಂಕದ ಕಾರಣಕ್ಕೆ ಅವಳಿ ಸೋದರಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಮಂಡ್ಯ: ಮದುವೆಯಾದರೆ ಬೇರೆ ಬೇರೆಯಾಗುತ್ತೇವೆ ಎಂಬ ಆತಂಕದ ಕಾರಣಕ್ಕೆ ಅವಳಿ ಸೋದರಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ಶ್ರೀರಂಗಪಟ್ಟಣ ತಾಲೂಕಿನ ಹಣಸನಹಳ್ಳಿ ಗ್ರಾಮದ ಸುರೇಶ್ ಮತ್ತು ಯಶೋಧ ದಂಪತಿಯ ಪುತ್ರಿಯರಾದ ದೀಪಿಕಾ ಮತ್ತು ದಿವ್ಯಾ (19 ವರ್ಷ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.
ಚಿಕ್ಕ ವಯಸ್ಸಿನಿಂದ ಈ ಸೋದರಿಯರು ಅನ್ಯೋನ್ಯವಾಗಿದ್ದು ಒಬ್ಬರಿಗೊಬ್ಬರು ಬಿಟ್ಟುಕೊಟ್ಟಿರಲಿಲ್ಲ. ಆದರೆ ಇದೀಗ ಪೋಷಕರು ಇಬ್ಬರನ್ನೂ ಬೇರೆ ಬೇರೆ ಮನೆಗೆ ವಿವಾಹ ಮಾಡಿಕೊಡಲು ತೀರ್ಮಾನಿಸಿದ್ದಾರೆ. ಇದರಿಂದ ತಾವು ಬೇರೆ ಆಗಬೇಕಾಗುವುದು ಎಂದು ಆತಂಕಗೊಂಡ ಇಬ್ಬರೂ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.
ಘಟನೆ ಸಂಬಂಧ ಅರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಲರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


