ಬೆಂಗಳೂರು: ಬೆಳ್ಳಂಬೆಳಗ್ಗೆ ಕೊಲೆ ಆರೋಪಿಗಳ ಕಾಲಿಗೆ ಗುಂಡೇಟು
ಹಾಡಹಗಲೇ ಹಣಕಾಸು ಲೇವಾದೇವಿ ಮಾಡುತ್ತಿದ್ದ ಮದನ್ ಕೊಲೆ ಮಾಡಿದ್ದ ಇಬ್ಬರೂ ಆರೋಪಿಗಳ ಕಾಲಿಗೆ ಜಯನಗರ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ಬೆಂಗಳೂರು : ಹಾಡಹಗಲೇ ಹಣಕಾಸು ಲೇವಾದೇವಿ ಮಾಡುತ್ತಿದ್ದ ಮದನ್ ಕೊಲೆ ಮಾಡಿದ್ದ ಇಬ್ಬರೂ ಆರೋಪಿಗಳ ಕಾಲಿಗೆ ಜಯನಗರ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ಮಹೇಶ್, ನವೀನ್ ಗುಂಡೇಟು ತಿಂದ ಆರೋಪಿಗಳು.
ಬಂಧಿತ ಆರೋಪಿಗಳು ಲಕ್ಕಸಂದ್ರ ನಿವಾಸಿ ಹಣಕಾಸು ಲೇವಾದೇವಿ ಮಾಡುತ್ತಿದ್ದ ಮದನ್ ಅನ್ನು ಜು. 2 ರಂದು ಬನಶಂಕರಿ ದೇವಾಲಯದ ಎದುರು ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಲೆ ಮಾಡಿದ್ದರು. ಕೃತ್ಯ ಎಸಗಿ ಮೂರು ದಿನಗಳ ಬಳಿಕ ಸೋಮವಾರ ವಕೀಲರ ವೇಷದಲ್ಲಿ ನಗರದ 37ನೇ ಎಸಿಎಂಎಂ ನ್ಯಾಯಾಲಯ ಮುಂದೆ ಶರಣಾಗಿದ್ದರು. ಕೋವಿಡ್ ನಿಯಮ ಪ್ರಕಾರ ಕೋರ್ಟ್ ಪ್ರವೇಶಕ್ಕೆ ನಿಷೇಧ ಇರುವ ಹಿನ್ನೆಲೆ ಜಯನಗರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.
ಸೋಮವಾರ ವಿಚಾರಣೆಗೆ ಒಳಪಡಿಸಿ ಮಂಗಳವಾರ ತಲಘಟ್ಟಪುರದ ತುರಹಳ್ಳಿ ಅರಣ್ಯದ ಬಳಿ ಬಿಸಾಡಿದ್ದ ಮಾರಕಾಸ್ತ್ರ ಜಪ್ತಿಮಾಡಿಕೊಳ್ಳಲು ಮಹೇಶ್ ಹಾಗೂ ನವೀನ್ ನನ್ನು ಪೊಲೀಸರು ಸ್ಥಳ ಮಹಜರಿಗೆ ಕರೆದೊಯ್ಯದಿದ್ದರು.
ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದರು. ತಪ್ಪಿಸಿಕೊಳ್ಳದಂತೆ ಇನ್ಸ್ಪೆಕ್ಟರ್ ಸುದರ್ಶನ್ ಎಚ್ಚರಿಕೆ ಕೊಟ್ಟು ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಆದರೂ, ಪೊಲೀಸರ ಹಲ್ಲೆ ಮಾಡಲು ಮುಂದಾದಾಗ ತಮ್ಮ ಆತ್ಮರಕ್ಷಣೆಗಾಗಿ ಆರೋಪಿಗಳ ಬಲಗಾಲಿಗೆ ಗುಂಡಿ ಹಾರಿಸಿ ವಶಕ್ಕೆ ಪಡೆದಿದ್ದಾರೆ.
ಈ ಘಟನೆಯಲ್ಲಿ ಜಯನಗರ ಪೊಲೀಸ್ ಠಾಣೆಯ ಪಿಎಸ್ಐ ಚಂದನ್ ಕಾಳೆ ಮತ್ತು ಎಎಸ್ಐ ಲಕ್ಷ್ಮಣಾಚಾರಿ ಗಾಯಗೊಂಡಿದ್ದಾರೆ. ಸದ್ಯ ಆರೋಪಿ ಹಾಗೂ ಗಾಯಾಳಿ ಪೊಲೀಸರಿಗೆ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ಈ ಪ್ರಕರಣದಲ್ಲಿ ಏಳು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಕೊಲೆಗೆ ಸಂಬಂಧಿಸಿದ ಇನ್ನೂ ಕೆಲ ಆರೋಪಿಗಳ ಪತ್ತೆ ಕಾರ್ಯ ಮುಂದುವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


