ರಾಜ್ಯ

ಬಾಗಲಕೋಟೆ: ಡಿಸಿಎಂ ಲಕ್ಷ್ಮಣ ಸವದಿ ಪುತ್ರನ ಕಾರು ಬೈಕ್ ಗೆ ಡಿಕ್ಕಿ, ಸವಾರ ದುರ್ಮರಣ 

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಪುತ್ರ ಚಿದಾನಂದ ಸವದಿಯವರ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಬಾಗಲಕೋಟೆ: ಡಿಸಿಎಂ ಲಕ್ಷ್ಮಣ ಸವದಿ ಪುತ್ರನ ಕಾರು ಬೈಕ್ ಗೆ ಡಿಕ್ಕಿ, ಸವಾರ ದುರ್ಮರಣ 
ಅಪಘಾತಕ್ಕೀಡಾದ ಬೈಕ್ ಮತ್ತು ಡಿಸಿಎಂ ಪುತ್ರ ಚಿದಾನಂದ ಸವದಿ
Published On :

ಬಾಗಲಕೋಟೆ: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಪುತ್ರ ಚಿದಾನಂದ ಸವದಿಯವರ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ದುರ್ಘಟನೆಯಲ್ಲಿ ಬೈಕ್ ಸವಾರ ಕೂಡಲೆಪ್ಪ ಬೋಳಿ (58) ತೀವ್ರ ಗಾಯಗೊಂಡು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ರಾತ್ರಿ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸಂಗಮ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಅಪಘಾತ ಸಂಭವಿಸಿದೆ.

ವಿಜಯಪುರ ಮಾರ್ಗವಾಗಿ ತೆರಳುತ್ತಿದ್ದ ಚಿದಾನಂದ ಅವರ ಕಾರು ಹೊಲದಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ ಹೋಗುತ್ತಿದ್ದ ಬೈಕ್ ಸವಾರನ ಮೇಲೆ ಗುದ್ದಿದೆ. ಮೃತರು ಬಾಗಲಕೋಟೆ ತಾಲ್ಲೂಕಿನ ಚಿಕ್ಕಹಂಡರಗಲ್ ನಿವಾಸಿಯೆಂದು ಗುರುತಿಸಲಾಗಿದೆ.

ಲಕ್ಷ್ಮಣ ಸವದಿಯವರ ಪುತ್ರ ಚಿದಾನಂದ ಪ್ರಯಾಣಿಸುತ್ತಿದ್ದ ಕೆಎ 22 ಎಂಸಿ 5151 ಸಂಖ್ಯೆಯ ಕಾರು ಇದಾಗಿದ್ದು, ಮೇಲ್ನೋಟಕ್ಕೆ ಡಿಸಿಎಂ ಪುತ್ರನ ಅಜಾಗರೂಕತೆಯೇ ಇದರಲ್ಲಿ ಕಂಡುಬರುತ್ತಿದ್ದು, ತಮ್ಮ ವಾಹನದ ನಂಬರ್ ಪ್ಲೇಟ್ ನ್ನು ಜಖಂಗೊಳಿಸಿ ಪರಾರಿಯಾಗಲು ಚಿದಾನಂದ ಸವದಿ ಯತ್ನಿಸಿದ್ದರು ಎಂಬ ಆರೋಪಗಳು ಕೇಳಿಬರುತ್ತಿದೆ.

ಅಪಘಾತಕ್ಕೀಡಾದ ಬೈಕ್ ಸವಾರನನ್ನು ಆಸ್ಪತ್ರೆಗೆ ಸೇರಿಸುವ ಬದಲು ಪರಾರಿಯಾಗಲು ಚಿದಾನಂದ ಯತ್ನಿಸಿದ್ದರು ಎಂದು ಹೇಳಲಾಗುತ್ತಿದೆ. ಅಪಘಾತದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಚಿದಾನಂದ್, ಅಪಘಾತವಾದ ಕಾರಿನಲ್ಲಿ ತಾನು ಇರಲಿಲ್ಲ, ತಾನು ಆ ಕಾರಿನ ಮುಂದಿನ ಕಾರಿನಲ್ಲಿ ಪ್ರಯಾಣಿಸುತ್ತಿದ್ದೆ ಎಂದು ಹೇಳಿದ್ದಾರೆ. 

ಹುನಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.