ಕೊರೋನಾ ಹಿನ್ನೆಲೆ: ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ
ಆಷಾಢ ಮಾಸ ಆರಂಭಕ್ಕೆ ಕೆಲವೇ ದಿನ ಬಾಕಿ, ಮೈಸೂರಿನ ನಾಡದೇವತೆ ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದಲ್ಲಿ ಭಕ್ತರ ದಂಡೇ ಸಾಗುತ್ತದೆ. ಆಷಾಢ ಶುಕ್ರವಾರಗಳಂತೂ ಜನವೋ ಜನ.

ಮೈಸೂರು: ಆಷಾಢ ಮಾಸ ಆರಂಭಕ್ಕೆ ಕೆಲವೇ ದಿನ ಬಾಕಿ, ಮೈಸೂರಿನ ನಾಡದೇವತೆ ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದಲ್ಲಿ ಭಕ್ತರ ದಂಡೇ ಸಾಗುತ್ತದೆ. ಆಷಾಢ ಶುಕ್ರವಾರಗಳಂತೂ ಜನವೋ ಜನ.
ಈ ಬಾರಿ ಕೋವಿಡ್-19 ಸಾಂಕ್ರಾಮಿಕ ಭೀತಿ ಇರುವುದರಿಂದ ಆಷಾಢ ಶುಕ್ರವಾರಗಳಂದು ಮತ್ತು ಶನಿವಾರ, ಭಾನುವಾರ ಸೇರಿದಂತೆ ಸಾರ್ವಜನಿಕ ರಜಾ ದಿನಗಳಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.
ಆಷಾಢ ಶುಕ್ರವಾರಗಳಂದು ಹೆಚ್ಚಿನ ಭಕ್ತರು ಆಗಮಿಸುವ ಹಿನ್ನೆಲೆ, ಕೋವಿಡ್ ಸೋಂಕು ಹರಡುವಿಕೆಗೆ ಮುಂಜಾಗ್ರತಾ ಕ್ರಮವಾಗಿ ಚಾಮುಂಡಿಬೆಟ್ಟ ಹಾಗೂ ಉತ್ತನಹಳ್ಳಿ ಜ್ವಾಲಾಮುಖಿ ತ್ರಿಪುರಸುಂದರಿ ದೇವಾಲಯಕ್ಕೆ ಸಾರ್ವಜನಿಕರ ನಿರ್ಬಂಧ ವಿಧಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊರೊನಾ ಅನ್‌ಲಾಕ್ ಹಿನ್ನೆಲೆಯಲ್ಲಿ ಜುಲೈ 5ರಿಂದ ಧಾರ್ಮಿಕ ಕೇಂದ್ರಗಳಿಗೆ ಭಕ್ತರ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಹೀಗಾಗಿ ಸೋಮವಾರ ಚಾಮುಂಡಿ ಬೆಟ್ಟಕ್ಕೆ ನೂರಾರು ಭಕ್ತರು ಭೇಟಿ ನೀಡಿ, ದೇವಿಯ ದರ್ಶನ ಪಡೆದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


