ರಾಜ್ಯ

ಹಿರಿಯ ಪತ್ರಕರ್ತ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಾಧ್ಯಮ ಸಲಹೆಗಾರ ಕೆ ಸಿ ಸದಾನಂದ ನಿಧನ

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ಮಾಧ್ಯಮ ಸಮನ್ವಯ ಅಧಿಕಾರಿಯಾಗಿದ್ದ ಹಿರಿಯ ಪತ್ರಕರ್ತ ಕೆ.ಸಿ.ಸದಾನಂದ ನಿಧನರಾಗಿದ್ದಾರೆ.

ಹಿರಿಯ ಪತ್ರಕರ್ತ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಾಧ್ಯಮ ಸಲಹೆಗಾರ ಕೆ ಸಿ ಸದಾನಂದ ನಿಧನ
ಪತ್ರಕರ್ತ ಸದಾನಂದ ಕೆ ಸಿ (ಸಂಗ್ರಹ ಚಿತ್ರ)
Published On :

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ಮಾಧ್ಯಮ ಸಮನ್ವಯ ಅಧಿಕಾರಿಯಾಗಿದ್ದ ಹಿರಿಯ ಪತ್ರಕರ್ತ ಕೆ.ಸಿ.ಸದಾನಂದ ನಿಧನರಾಗಿದ್ದಾರೆ.

ತೀವ್ರ ಹೃದಯಾಘಾತದಿಂದ ಅವರು ಕಳೆದ ರಾತ್ರಿ 12 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ. ಪತ್ನಿ ಮತ್ತು ಪುತ್ರನನ್ನು ಅವರು ಅಗಲಿದ್ದಾರೆ.ತೀವ್ರ ಹೃದಯಾಘಾತಕ್ಕೀಡಾಗಿದ್ದ ಅವರನ್ನು ಕೂಡಲೇ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯುವಾಗಲೇ ಮಾರ್ಗ ಮಧ್ಯೆ ಅಸುನೀಗಿದ್ದಾರೆ.

ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ 2018ರಲ್ಲಿ ರಾಜ್ಯದ ಸಿಎಂ ಆಗಿದ್ದಾಗ ಹಿರಿಯ ಪತ್ರಕರ್ತ ಸದಾನಂದ ಕೆ.ಸಿ ಅವರನ್ನು ಮಾಧ್ಯಮ ಸಮನ್ವಯ ಅಧಿಕಾರಿಯನ್ನಾಗಿ ನೇಮಿಸಿದ್ದರು. ಅವರು ಈ ಹಿಂದೆ ಸಂಜೆವಾಣಿ, ಕರ್ನಾಟಕ ಮಲ್ಲ ಪತ್ರಿಕೆಗಳಲ್ಲಿ ಸುದೀರ್ಘ ಕಾಲ ಪತ್ರಕರ್ತರಾಗಿ ಕರ್ತವ್ಯ ನಿರ್ವಹಿಸಿದ್ದರು.

ನಿಧನಕ್ಕೆ ಮೊದಲು ಕೂಡ ಹೆಚ್ ಡಿ ಕುಮಾರಸ್ವಾಮಿಯವರ ಬಳಿ ಮಾಧ್ಯಮ ನಿರ್ವಹಣೆ ಮಾಡುತ್ತಿದ್ದರು.

ಮಾಜಿ ಸಿಎಂ ಕಂಬನಿ: ಪತ್ರಕರ್ತ ಸದಾನಂದ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ. ದೀರ್ಘ ಕಾಲದ ನನ್ನ ಒಡನಾಡಿ, ಹಿರಿಯ ಪತ್ರಕರ್ತ, ಮಾಧ್ಯಮ ಕಾರ್ಯದರ್ಶಿಯೂ ಆಗಿದ್ದ ಕೆ.ಸಿ. ಸದಾನಂದ ನಿಧನರಾಗಿದ್ದಾರೆ. ಅವರ ಅಗಲಿಕೆ ನನ್ನನ್ನು ನೋವಿಗೆ ತಳ್ಳಿದೆ. ಎಂಥ ಆಮಿಷಗಳಿಗೂ ಜಗ್ಗದ ಸದಾನಂದ ಕರ್ತವ್ಯನಿಷ್ಠೆ, ಸ್ವಾಮಿನಿಷ್ಠೆಯನ್ನೂ ಪ್ರದರ್ಶಿಸಿದ್ದರು ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.