ರಾಜ್ಯ

ಬೆಂಗಳೂರು: ವಸಿಷ್ಠ ಕೋ-ಆಪರೇಟಿವ್ ಸೊಸೈಟಿ ಪ್ರಕರಣ ಸಿಐಡಿಗೆ ಹಸ್ತಾಂತರ?

ವಸಿಷ್ಠ ಕೋ-ಆಪರೇಟಿವ್ ಸೊಸೈಟಿ ಪ್ರಕರಣ ಸಿಐಡಿಗೆ ಹಸ್ತಾಂತರವಾಗುವ ಸಾಧ್ಯತೆಯಿದೆ. ಸದ್ಯ ಹನುಮಂತನಗರ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು: ವಸಿಷ್ಠ ಕೋ-ಆಪರೇಟಿವ್ ಸೊಸೈಟಿ ಪ್ರಕರಣ ಸಿಐಡಿಗೆ ಹಸ್ತಾಂತರ?
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ವಸಿಷ್ಠ ಕೋ-ಆಪರೇಟಿವ್ ಸೊಸೈಟಿ ಪ್ರಕರಣ ಸಿಐಡಿಗೆ ಹಸ್ತಾಂತರವಾಗುವ ಸಾಧ್ಯತೆಯಿದೆ. ಸದ್ಯ ಹನುಮಂತನಗರ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
 
ರಾಜ್ಯ ತನಿಖಾ ಸಂಸ್ಥೆ ಸಿಐಡಿಗೆ ವರ್ಗಾಯಿಸುವಂತೆ ಹನುಮಂತನಗರ ಠಾಣಾಧಿಕಾರಿ ಡಿಸಿಪಿಗೆ ಪತ್ರ ಬರೆದಿದ್ದಾರೆ. ದಿನೇ ದಿನೇ ದೂರುದಾರರ ಸಂಖ್ಯೆ ಹೆಚ್ಚುತ್ತಿದ್ದು, ಈಗಾಗಲೇ 70ಕ್ಕೂ ಹೆಚ್ಚು ಹೂಡಿಕೆದಾರರಿಂದ ಕೇಸ್​ ದಾಖಲಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ ಎನ್ನಲಾಗುತ್ತಿದೆ.

ಪೊಲೀಸ್ ಕಮಿಷನರ್​ ಮೂಲಕ ಸಿಐಡಿಗೆ ಪ್ರಕರಣ ಹಸ್ತಾಂತರಿಸುವಂತೆ ಪತ್ರ ರವಾನೆಯಾಗುವ ಸಾಧ್ಯತೆ ಇದೆ. ಈಗಾಗಲೇ ಆರೋಪಿಗಳ ಪಾಸ್​ ಪೋರ್ಟ್ ವಶಕ್ಕೆ ಪಡೆದಿದ್ದು, ಬೆಂಗಳೂರು ಬಿಟ್ಟು ತೆರಳದಂತೆ ಸೂಚನೆ ನೀಡಲಾಗಿದೆ. ರಿಜಿಸ್ಟರ್ ಆಫ್ ಕೋ-ಅಪರೇಟಿವ್ ಸೊಸೈಟಿಯಿಂದಲೂ ಬ್ಯಾಂಕ್ ಬಗ್ಗೆ ಮಾಹಿತಿ ಪೊಲೀಸರು  ಪಡೆದಿದ್ದಾರೆ.

ಶನಿವಾರದವರೆಗೆ ಪೊಲೀಸರು ಸುಮಾರು 70 ಜನರ ಹೇಳಿಕೆಯನ್ನು ದಾಖಲಿಸಿದ್ದರು, ಮತ್ತು ಇದರಲ್ಲಿ ಸುಮಾರು 11 ಕೋಟಿ ರೂ. ಹಣ ದುರ್ಬಳಕೆಯಾಗಿದೆ, ಸೋಮವಾರ ಕೂಡ ಪೊಲೀಸರಿಗೆ ಸುಮಾರು 15 ಜನರಿಂದ ಹೇಳಿಕೆ ಸಿಕ್ಕಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.