ಹುಬ್ಬಳ್ಳಿ- ಧಾರವಾಡದಲ್ಲಿ ಕೋವಿಡ್ ಲಸಿಕೆ ಕೊರತೆ, ಹಳ್ಳಿಗಳತ್ತ ಮುಖಮಾಡಿರುವ ಜನರು!
ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ಲಸಿಕಾ ಕೇಂದ್ರಗಳಲ್ಲಿ ಕೋವಿಡ್-19 ಡೋಸ್ ಪೂರೈಕೆ ಕೊರತೆಯಿಂದಾಗಿ ಲಸಿಕೆ ಸುಲಭವಾಗಿ ಲಭ್ಯವಿರುವ ಗ್ರಾಮೀಣ ಪ್ರದೇಶಗಳತ್ತ ಜನರು ಹೋಗುತ್ತಿದ್ದಾರೆ.

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ಲಸಿಕಾ ಕೇಂದ್ರಗಳಲ್ಲಿ ಕೋವಿಡ್-19 ಡೋಸ್ ಪೂರೈಕೆ ಕೊರತೆಯಿಂದಾಗಿ ಲಸಿಕೆ ಸುಲಭವಾಗಿ ಲಭ್ಯವಿರುವ ಗ್ರಾಮೀಣ ಪ್ರದೇಶಗಳತ್ತ ಜನರು ಹೋಗುತ್ತಿದ್ದಾರೆ.
ಧಾರವಾಡದಲ್ಲಿ 15 ಲಕ್ಕೂ ಹೆಚ್ಚು ಜನರು 18 ವರ್ಷಕ್ಕಿಂತ ಮೇಲ್ಟಟ್ಟವರಾಗಿದ್ದಾರೆ. ಈ ಪೈಕಿ 4.9 ಲಕ್ಷ ಮಂದಿ ಮೊದಲ ಡೋಸ್ ಪಡೆದುಕೊಂಡಿದ್ದರೆ, 1.01 ಲಕ್ಷ ಎರಡನೇ ಡೋಸ್ ಪಡೆದುಕೊಂಡಿದ್ದಾರೆ. ಆರೋಗ್ಯ ಇಲಾಖೆ ಪ್ರತಿದಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ 200 ಕೇಂದ್ರಗಳಲ್ಲಿ ಲಸಿಕೆ ಹಾಕುತ್ತಿದೆ. ಆಫ್ ಲೈನ್ ತರಗತಿಗಳು ಆರಂಭವಾಗುವ ಮುನ್ನ ಎಲ್ಲಾ ಕಾಲೇಜ್ ವಿದ್ಯಾರ್ಥಿಗಳಿಗೂ ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಆದಾಗ್ಯೂ, ಅವಳಿ ನಗರಗಳಲ್ಲಿ, ಲಸಿಕೆಗಳ ಪೂರೈಕೆಯು ಜನಸಂಖ್ಯೆಯ ಗಾತ್ರಕ್ಕೆ ಅನುಗುಣವಾಗಿಲ್ಲ ಮತ್ತು ಧಾರವಾಡ ಜಿಲ್ಲಾಸ್ಪತ್ರೆ ಮತ್ತು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಜನರು ಲಸಿಕೆ ಪಡೆಯಲು ಉದ್ದನೆಯ ಸರತಿ ಸಾಲಿನಲ್ಲಿ ನಿಂತಿರುತ್ತಾರೆ. ಆದರೆ, ಲಸಿಕೆ ಕೊರತೆಯಿಂದಾಗಿ ಅನೇಕ ಜನರು ಲಸಿಕೆ ಪಡೆಯದೆ ಹಿಂದಿರುಗುತ್ತಾರೆ. ಆದ್ದರಿಂದ, ಮೂರನೇ ಅಲೆ ಪ್ರಾರಂಭವಾಗುವ ಮೊದಲು ಲಸಿಕೆ ಪಡೆಯಲು ಅನೇಕ ಜನರು ಈಗ ಹಳ್ಳಿಗಳತ್ತ ತೆರಳುತ್ತಿದ್ದಾರೆ.
ಪ್ರತಿದಿನ ಲಸಿಕಾ ಕೇಂದ್ರಗಳಲ್ಲಿ ಲಭ್ಯವಿರುವ ಲಸಿಕೆಯ ಪಟ್ಟಿಯನ್ನು ಜಿಲ್ಲಾಡಳಿತ ಬಿಡುಗಡೆ ಮಾಡುತ್ತಿದ್ದು, ಲಸಿಕೆ ಪೂರೈಕೆ ಉತ್ತಮವಾಗಿರುವ ಹಳ್ಳಿಗಳನ್ನು ಜನರು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ.ನಗರದಲ್ಲಿ ಲಸಿಕೆ ದೊರೆಯದ ಕಾರಣ ಹುಬ್ಬಳ್ಳಿ ಬಳಿಯ ನೂಲ್ವಿ ಬಳಿಗೆ ತೆರಳಿ ಲಸಿಕೆ ಪಡೆದುಕೊಂಡಿರುವುದಾಗಿ ಉದ್ಯಮಿ ಸಿದ್ದೇಶ್ ಅಲಾದಕಟ್ಟಿ ಹೇಳಿದರು.
ಜಿಲ್ಲೆಯಲ್ಲಿ ಲಸಿಕೆ ಕೊರತೆಯಿದೆ ಆದರೆ ಬೇಡಿಕೆ ಹೆಚ್ಚಾಗಿದೆ ಎಂದು ಆರೋಗ್ಯ ಅಧಿಕಾರಿ ಹೇಳಿದ್ದಾರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಆಸ್ಪತ್ರೆಗಳಿಗೆ ಲಸಿಕೆ ಪೂರೈಸುತ್ತಿದ್ದೇವೆ. ಅಗತ್ಯವಿರುವಷ್ಟು ಸಂಖ್ಯೆಯ ಡೋಸ್ ಸಿಕ್ಕಿದ ನಂತರ ಎಲ್ಲಾ ಆರೋಗ್ಯ ಕೇಂದ್ರಗಳಿಗೆ ಲಸಿಕೆ ಪೂರೈಕೆಯನ್ನು ಹೆಚ್ಚಿಸಲಾಗುವುದು ಎಂದು ಅವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


