ವಿಮಾನ ಪ್ರಯಾಣಿಕರಿಗೆ ಶಾಕ್: ಬಳಕೆದಾರ ಅಭಿವೃದ್ಧಿ ಶುಲ್ಕ ಹೆಚ್ಚಳಕ್ಕೆ ಕೆಐಎ ಪ್ರಸ್ತಾಪ!
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಆಡಳಿತ ಮಂಡಳಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್) ಬಳಕೆದಾರ ಅಭಿವೃದ್ಧಿ ಶುಲ್ಕ (ಯುಡಿಎಫ್) ಅನ್ನು ಹೆಚ್ಚಿಸಲು ಪ್ರಸ್ತಾಪಿಸಿದೆ.

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಆಡಳಿತ ಮಂಡಳಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್) ಬಳಕೆದಾರ ಅಭಿವೃದ್ಧಿ ಶುಲ್ಕ (ಯುಡಿಎಫ್) ಅನ್ನು ಹೆಚ್ಚಿಸಲು ಪ್ರಸ್ತಾಪಿಸಿದೆ.
ಮೂಲಗಳ ಪ್ರಕಾರ ಈ ವರ್ಷದ ಅಕ್ಟೋಬರ್ ನಿಂದಲೇ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಳಕೆದಾರ ಅಭಿವೃದ್ಧಿ ಶುಲ್ಕ ಹೆಚ್ಚಿಸುವ ಸಾಧ್ಯತೆ ಇದೆ. ಪ್ರಸ್ತುತ ಈ ಪ್ರಸ್ತಾಪವನ್ನು ವಿಮಾನ ನಿಲ್ದಾಣಗಳ ಆರ್ಥಿಕ ನಿಯಂತ್ರಣ ಪ್ರಾಧಿಕಾರಕ್ಕೆ (ಎಇಆರ್ ಎ) ಸಲ್ಲಿಸಲಾಗಿದ್ದು, ಅನುಮೋದನೆ ಬಾಕಿ ಇದೆ.
ಈಗ ದೇಶೀಯ ಪ್ರಯಾಣಿಕರಿಗೆ ಬಳಕೆದಾರ ಅಭಿವೃದ್ಧಿ ಶುಲ್ಕ 184 ರೂ. ಮತ್ತು ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಇದು 839 ರೂ ವಿಧಿಸುವ ಕುರಿತು ಪ್ರಸ್ತಾಪ ಸಲ್ಲಿಸಲಾಗಿದೆ. ಬಿಐಎಲ್ ವಿಧಿಸಿರುವ ಶುಲ್ಕ ಹೆಚ್ಚಳವನ್ನು ಎಇಆರ್ ಎ ಪರಿಗಣಿಸಿದ ನಂತರ, ಮೊದಲ ಹಂತದಲ್ಲಿ ದೇಶೀಯ ಪ್ರಯಾಣಿಕರಿಗೆ 450 ರೂ. ಮತ್ತು ನಂತರದ ಹಂತದಲ್ಲಿ 555 ರೂ. ಅಂತರರಾಷ್ಟ್ರೀಯ ಪ್ರಯಾಣಿಕರಿಗೆ 1,350 ರೂ ಮತ್ತು ನಂತರದ ಹಂತದಲ್ಲಿ 2,220 ರೂ. ಶುಲ್ಕ ಹೆಚ್ಚಳಕ್ಕೆ ಪ್ರಸ್ತಾಪಿಸಲಾಗಿದೆ. ಈ ಕುರಿತಂತೆ ಏರಾ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಣೆ ನೀಡಿದ್ದು, ಈ ಸಂಬಂಧ ಸಾರ್ವಜನಿಕರ ಪ್ರತಿಕ್ರಿಯೆ ಕೇಳಲಾಗಿದೆ.
ಹೆಚ್ಚಳದ ಹಿಂದಿನ ಕಾರಣವನ್ನು ವಿವರಿಸಿದ ಬಿಐಎಲ್ ಸಿಇಒ ಮತ್ತು ಎಂಡಿ ಹರಿ ಮಾರಾರ್ ಅವರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿ, 'ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 13,000 ಕೋಟಿ ರೂ.ಗಳ ವಿಸ್ತರಣಾ ಕಾರ್ಯಕ್ರಮವನ್ನು ಪೂರ್ಣಗೊಳಿಸಲು ಮತ್ತು ಕಾರ್ಯಗತಗೊಳಿಸಲು ಹೊರಟಿರುವ ಸಮಯದಲ್ಲಿ ಸುಂಕ ಪರಿಷ್ಕರಣೆ ಬಂದಿದೆ. ಈ ಹೂಡಿಕೆಯ ಚೇತರಿಕೆಯ ಅವಧಿಯಲ್ಲಿ, ಸಾಂಕ್ರಾಮಿಕದ ಪರಿಣಾಮದಿಂದಾಗಿ ಮತ್ತೆ ವಿಮಾನ ಸಂಚಾರವು ಅತ್ಯಂತ ಕೆಳಮಟ್ಟದಲ್ಲಿದೆ ಎಂಬ ಅಂಶದಿಂದಾಗಿ ಸುಂಕ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


