ಧಾರವಾಡ: ಬೀದಿ ನಾಯಿಗಳ ದಾಳಿಗೆ 8 ವರ್ಷದ ಬಾಲಕ ಬಲಿ
ಬೀದಿ ನಾಯಿಗಳು ದಾಳಿ ಮಾಡಿದ ಹಿನ್ನೆಲೆಯಲ್ಲಿ 8 ವರ್ಷದ ಬಾಲಕನೋರ್ವ ಮೃತಪಟ್ಟಿರುವ ಘಟನೆ ಧಾರವಾಡದ ಹೊರವಲಯದ ನವಲೂರ ಗ್ರಾಮದ ರೈಲು ನಿಲ್ದಾಣದ ಬಳಿ ನಡೆದಿದೆ.

ಧಾರವಾಡ: ಬೀದಿ ನಾಯಿಗಳು ದಾಳಿ ಮಾಡಿದ ಹಿನ್ನೆಲೆಯಲ್ಲಿ 8 ವರ್ಷದ ಬಾಲಕನೋರ್ವ ಮೃತಪಟ್ಟಿರುವ ಘಟನೆ ಧಾರವಾಡದ ಹೊರವಲಯದ ನವಲೂರ ಗ್ರಾಮದ ರೈಲು ನಿಲ್ದಾಣದ ಬಳಿ ನಡೆದಿದೆ.
ಬಾಬುಲ್ ರಾಠೋಡ (8) ಸಾವನ್ನಪ್ಪಿದ ಬಾಲಕ. ರಾಯಚೂರು ಜಿಲ್ಲೆಯ ಲಿಂಗಸೂರು ಮೂಲದ ಗೋಪಾಲ್ ಹಾಗು ಚನ್ನಮ್ಮ ದಂಪತಿಯ ಪುತ್ರ ಬಾಬುಲ್ ರಾಠೋಡ ಕಟ್ಟಡ ಕಾಮಗಾರಿಗಾಗಿ ಪೋಷಕರ ಜೊತೆ ಧಾರವಾಡಕ್ಕೆ ಬಂದಿದ್ದ.
ಬಾಲಕನನ್ನು ಕೆಲಸದ ಜಾಗದಲ್ಲಿ ಬಿಟ್ಟು ಪೋಷಕರು ತಿಂಡಿ ತಿನ್ನಲು ಹೋಗಿದ್ದರು. ಈ ವೇಳೆ ನಾಯಿಗಳು ಬಾಲಕನ ಮೇಲೆರಗಿವೆ. ನಾಯಿಗಳ ದಾಳಿಯಿಂದ ಗಾಯಗೊಂಡ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಮೃತಪಟ್ಟ ಬಾಲಕನ ಪೋಷಕರು ರಾಯಚೂರು ಮೂಲದವರಾಗಿದ್ದು, ಕಟ್ಟಡ ನಿರ್ಮಾಣ ಕೆಲಸಕ್ಕಾಗಿ ಧಾರವಾಡಕ್ಕೆ ಬಂದಿದ್ದರು.
ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ನಾಯಿ ಕಡಿತದಿಂದಲೇ ಬಾಲಕ ಸಾವನ್ನಪ್ಪಿರುವುದನ್ನು ಪೊಲೀಸರು ದೃಢಪಡಿಸಿಲ್ಲ. ವೈದ್ಯಕೀಯ ವರದಿ ಬಂದ ಬಳಿಕ ಸತ್ಯಾಂಶ ತಿಳಿದುಬರಲಿದೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


