ರಾಜ್ಯ

ಕಡೆಗೂ ಕೊಡಗು ಅನ್​ಲಾಕ್: ಸಹಜ ಸ್ಥಿತಿಯತ್ತ ಜನಜೀವನ

ಕೊಡಗು ಜಿಲ್ಲೆಯಲ್ಲೂ ಕೋವಿಡ್‌ ಪಾಸಿಟಿವ್‌ ಪ್ರಕರಣಗಳು ಇಳಿಮುಖವಾಗುತ್ತಿದ್ದು ಶುಕ್ರವಾರದಿಂದ ಲಾಕ್‌ಡೌನ್‌ ಸಡಿಲಿಕೆಯಾಗಲಿದೆ.

ಕಡೆಗೂ ಕೊಡಗು ಅನ್​ಲಾಕ್: ಸಹಜ ಸ್ಥಿತಿಯತ್ತ ಜನಜೀವನ
ಸಂಗ್ರಹ ಚಿತ್ರ
Published On :

ಮಡಿಕೇರಿ: ಕೊಡಗು ಜಿಲ್ಲೆಯಲ್ಲೂ ಕೋವಿಡ್‌ ಪಾಸಿಟಿವ್‌ ಪ್ರಕರಣಗಳು ಇಳಿಮುಖವಾಗುತ್ತಿದ್ದು ಶುಕ್ರವಾರದಿಂದ ಲಾಕ್‌ಡೌನ್‌ ಸಡಿಲಿಕೆಯಾಗಲಿದೆ. 

ಸೋಂಕು ಕಡಿಮೆಯಾಗದ ಹಿನ್ನಲೆ ರಾಜ್ಯದೆಲ್ಲೆಡೆ ಲಾಕ್​ಡೌನ್​ ತೆರವು ಮಾಡಿದರೂ ಕೊಡಗು ಜಿಲ್ಲೆಯಲ್ಲಿ ಮಾತ್ರ ನಿರ್ಬಂಧ ಮುಂದುವರೆಸಲಾಗಿತ್ತು. ಪ್ರವಾಸೋದ್ಯಮವೇ ಮೂಲ ಆದಾಯವಾಗಿರುವ ಕೊಡಗಿನಲ್ಲಿ ಲಾಕ್​ಡೌನ್​ನಿಂದಾಗಿ ಸಾಕಷ್ಟು ನಷ್ಟ ಉಂಟಾಗಿದೆ.

ಸೋಂಕು ಇಳಿಕೆಯಾದ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಸರ್ಕಾರ ಜುಲೈ 19ರ ತನಕ ವಿನಾಯಿತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಇದರಂತೆ ಜಿಲ್ಲೆಯಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳುವ ನಿರೀಕ್ಷೆಯಿದೆ. ಈ ನಡುವೆ ಜಿಲ್ಲಾಡಳಿತದಿಂದ ಶುಕ್ರವಾರ ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.