ಸಂಪುಟ ವಿಸ್ತರಣೆಯ ಚಿಂತನೆಗಳಿಲ್ಲ: ಸಿಎಂ ಯಡಿಯೂರಪ್ಪ ಸ್ಪಷ್ಟನೆ
ರಾಜ್ಯ ಸಚಿವ ಸಂಪುಟ ವಿಸ್ತರಣೆ, ಪುನಾರಚನೆಯ ಯಾವುದೇ ಚಿಂತನೆಗಳೂ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಸ್ಪಷ್ಟಪಡಿಸಿದ್ದಾರೆ.

ಕಲಬುರಗಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ, ಪುನಾರಚನೆಯ ಯಾವುದೇ ಚಿಂತನೆಗಳೂ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯ ಸಚಿವ ಸಂಪುಟ ವಿಸ್ತರಣೆ, ಪುನಾರಚನೆಯ ಯಾವುದೇ ಚಿಂತನೆಗಳೂ ಇಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ಕೇಂದ್ರ ಸಂಪುಟದಲ್ಲಿ ರಾಜ್ಯದ ನಾಲ್ವರು ನಾಯಕರಿಗೆ ಸ್ಥಾನ ನೀಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಆರಂಭವಾಗುವ ಸಾಧ್ಯತೆಗಳಿದ್ದು, ಮೂರನೇ ಅಲೆ ತಡೆಯನ್ನು ಪರಿಣಾಮಕಾರಿಯಾಗಿ ತಡೆಯಲು ಕ್ರಮಗಳನ್ನು ಕೈಗೊಳ್ಳಬೇಕಿದೆ. ಇದರ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನೂ ನಡೆಸಬೇಕಿದೆ ಎಂದು ತಿಳಿಸಿದ್ದಾರೆ.
ಬಳಿಕ ಕೆಆರ್'ಎಸ್ ಅಣೆಕಟ್ಟು ಬಿರುಕು ವಿಚಾರ ಸಂಬಂಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಂಡ್ಯ ಸಂಸದೆ ಸುಮಲತಾ ನಡುವೆ ಮುಂದುವರೆದಿರುವ ವಾಕ್ಸಮರ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಲು ಯಡಿಯೂರಪ್ಪ ಅವರು ನಿರಾಕರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


