ರಾಜ್ಯ

ಕೇರಳ, ಮಹಾರಾಷ್ಟ್ರದಲ್ಲಿ ಕೋವಿಡ್ ಕೇಸ್ ಹೆಚ್ಚಾಳವು ರಾಜ್ಯದಲ್ಲೂ ಆತಂಕ ಸೃಷ್ಟಿಸಿದೆ: ಬಿಬಿಎಂಪಿ

ನೆರೆ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರಗಳಲ್ಲಿ ಕೊರೋನಾ ಸೋಂಕು ಹೆಚ್ಚಾಗಿದ್ದು, ಈ ಬೆಳವಣಿಗೆ ರಾಜ್ಯದಲ್ಲೂ ಆಂತಕ ಸೃಷ್ಟಿಸುತ್ತಿದೆ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಅವರು ಹೇಳಿದ್ದಾರೆ.

ಕೇರಳ, ಮಹಾರಾಷ್ಟ್ರದಲ್ಲಿ ಕೋವಿಡ್ ಕೇಸ್ ಹೆಚ್ಚಾಳವು ರಾಜ್ಯದಲ್ಲೂ ಆತಂಕ ಸೃಷ್ಟಿಸಿದೆ: ಬಿಬಿಎಂಪಿ
ಗೌರವ್ ಗುಪ್ತಾ
Published On :

ಬೆಂಗಳೂರು: ನೆರೆ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರಗಳಲ್ಲಿ ಕೊರೋನಾ ಸೋಂಕು ಹೆಚ್ಚಾಗಿದ್ದು, ಈ ಬೆಳವಣಿಗೆ ರಾಜ್ಯದಲ್ಲೂ ಆಂತಕ ಸೃಷ್ಟಿಸುತ್ತಿದೆ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಅವರು ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಂಗಳೂರು ನಗರ ಹಾಗೂ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.2ಕ್ಕಿಂತಲೂ ಕಡಿಮೆಯಿದೆ. ಆದರೆ, ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಲ್ಲಿ ಶೇ.4 ಮತ್ತು ಶೇ.10ರಷ್ಟಿದೆ. ಆ ರಾಜ್ಯಗಳಿಂದ ಕರ್ನಾಟಕ ಹಾಗೂ ಬೆಂಗಳೂರಿಗೆ ಸಾಕಷ್ಟು ಜನರು ಪ್ರಯಾಣ ಮಾಡುತ್ತಿದ್ದು, ಇದು ಆತಂಕವನ್ನು ಹೆಚ್ಚಾಗುವಂತೆ ಮಾಡಿದೆ ಎಂದು ಹೇಳಿದ್ದಾರೆ. 

ಸರ್ಕಾರದ ಆದೇಶದಂತೆ ಪರಿಣಾಮಕಾರಿ ರೀತಿಯಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಸಂಗ್ರಹ ಮಾಡಿದ ಸ್ಯಾಂಪಲ್ ಗಳನ್ನು ಜೀನೋಮ್‌ ಸೀಕ್ವೆನ್ಸಿಂಗ್‌ (ಡಿಎನ್‌ಎ ಜೋಡಣೆಯ ಕ್ರಮ) ಪತ್ತೆ ಪರೀಕ್ಷೆಗೆ ಕಳುಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. 

ನಗರದಲಲಿ ನಿತ್ಯ 500-600 ಪ್ರಕರಣಗಳು ಪತ್ತೆಯಾಗುತ್ತಿವೆ. ವಲಯವಾರು ಎಲ್ಲೆಲ್ಲಿ ಪ್ರಕರಣ ಹೆಚ್ಚಾಗುತ್ತಿವೆ ಎಂಬುದನ್ನು ಗುರುತಿಸಲಾಗುತ್ತಿದೆ. ಸೋಂಕಿತರ ಮನೆಗಳನ್ನು ಮೈಕ್ರೋ ಕಂಟೈನ್ಮೆಂಟ್ ವಲಯವಾಗಿ ಗುರುತಿಸಿ, ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗುತ್ತಿದೆ. ವಿಶೇಷ ಆಯುಕ್ತ (ಆರೋಗ್ಯ), ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸೋಂಕು ಹೆಚ್ಚಳ ತಡೆಯಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳುತ್ತಿದ್ದಾರೆ. ಎಂಟು ವಲಯದಲ್ಲಿ ಹೆಚ್ಚು ಪ್ರಕರಣ ಕಂಡು ಬರುತ್ತಿದ್ದು, ಪರೀಕ್ಷೆ ಹೆಚ್ಚಿಸಲು ಸೂಚನೆ ನೀಡಲಾಗಿದೆ ಎಂದಿದ್ದಾರೆ. 

ಇದೇ ವೇಳೆ ಭೋಗ್ಯದ ಅವಧಿ ಮುಗಿದ ಬಿಬಿಎಂಪಿ ಆಸ್ತಿಯನ್ನು ಕಾನೂನು ಪ್ರಕಾರ ಹಿಂಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. 

ಭೋಗ್ಯದ ಅವಧಿ ಮುಗಿದ ಆಸ್ತಿಯ ಪಟ್ಟಿ ಪರಿಶೀಲಿಸಿ ಕೂಡಲೇ ಹಿಂಪಡೆಯುವ ಕಾರ್ಯಕ್ಕೆ ಚಾಲನೆ ನೀಡುತ್ತೇವೆ. ಈ ಹಿಂದೆ ವಿವಿಧ ಉದ್ದೇಶಗಳಿಂದ ಸಂಘ ಸಂಸ್ಥೆಗಳಿಗೆ ಭೋಗ್ಯಕ್ಕೆ ಪಾಲಿಕೆ ಆಸ್ತಿಯನ್ನು ಕೊಟ್ಟಿರಬಹುದು. ಆದರೆ, ಈಗ ಪಾಲಿಕೆಗೆ ವಿವಿಧೋದ್ದೇಶಗಳಿಗಾಗಿ ಹಲವೆಡೆ ಭೂಮಿಯ ಅವಶ್ಯಕತೆ ಇದೆ. ಹಾಗೆಯೇ ಸಾರ್ವಜನಿಕ ಉದ್ದೇಶಕ್ಕಾಗಿಯೂ ಜಮೀನು ಮತ್ತು ಕಟ್ಟಡಗಳ ಅವಶ್ಯಕತೆ ಇದ್ದು, ಭೋಗ್ಯದ ಅವಧಿ ಮುಗಿದ ಆಸ್ತಿಯನ್ನು ಹಿಂಪಡೆಯುತ್ತೇವೆ. ಭೋಗ್ಯದ ಅವಧಿ ಮುಗಿದ ಪಾಲಿಕೆ ಆಸ್ತಿಯನ್ನು ವಾಪಸ್ ಪಡೆಯಲು ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುತ್ತದೆ. 

ಈ ಕುರಿತ ವರದಿಯೊಂದನ್ನು ಸಿದ್ಧಪಡಿಸಿಕೊಂಡಿದ್ದು, ಕಾನೂನು ಪ್ರಕ್ರಿಯೆಯಂತೆ ವಶಕ್ಕೆ ಪಡೆಯಲಾಗುವುದು. ಭೋಗ್ಯಕ್ಕೆ ನೀಡಿರುವ ಪಾಲಿಕೆಯ ಎಲ್ಲಾ ಕಟ್ಟಡಗಳ ದಾಖಲಾತಿಗಳನ್ನು ಪುನರ್ ಪರಿಶೀಲಿಸಿ ವಶಕ್ಕೆ ಪಡೆದ ಬಳಿಕ ಇತರೆ ಉದ್ದೇಶಕ್ಕೆ ಬಳಕೆ ಮಾಡಲಾಗುತ್ತದೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.