ಗಣಿಗಾರಿಕೆ ವಿರುದ್ಧದ ಸುಮಲತಾ ಹೋರಾಟಕ್ಕೆ ರೈತ ಸಂಘದ ಬೆಂಬಲ
ಕೆಆರ್ ಎಸ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ಧದ ಹೋರಾಟಕ್ಕೆ ಸಂಸದೆ ಸುಮಲತಾ ಅವರಿಗೆ ರೈತ ಸಂಘ ಬೆಂಬಲ ವ್ಯಕ್ತಪಡಿಸಿದೆ.

ಮೈಸೂರು: ಕೆಆರ್ ಎಸ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ಧದ ಹೋರಾಟಕ್ಕೆ ಸಂಸದೆ ಸುಮಲತಾ ಅವರಿಗೆ ರೈತ ಸಂಘ ಬೆಂಬಲ ವ್ಯಕ್ತಪಡಿಸಿದೆ.
ಮೈಸೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ರೈತರ ಜೀವನಾಡಿ ಕೆಆರ್ ಎಸ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಜಲಾಶಯದ ಅಸ್ತಿತ್ವಕ್ಕೆ ಅಪಾಯವಿದೆ. ಇದರ ಮೇಲೆ ಅವಲಂಬಿತರಾಗಿರುವ ಸಾವಿರಾರು ಜನರ ಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದರು.
ಜಲಾಶಯದ ಸುತ್ತಮುತ್ತಲಿನ 20 ಮೀಟರ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಅಥವಾ ಸಕ್ರಮ ಯಾವುದೇ ಗಣಿಗಾರಿಕೆಯಾಗಲೀ, ಅದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು, ಈ ನಿಟ್ಟಿನಲ್ಲಿ ಸರ್ಕಾರ ಮುಂದಾಗಬೇಕು ಎಂದು ಅವರು ಒತ್ತಾಯಿಸಿದರು.
ಅಕ್ರಮ ಗಣಿಗಾರಿಕೆ ಕುರಿತು ಸಂಸದೆ ಸುಮಲತಾ ಹೋರಾಟಕ್ಕೆ ನಿಂತಿದ್ದು, ಅದರ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ಈ ವಿಚಾರದಲ್ಲಿ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ, ಜೆಡಿಎಸ್ ಮುಖಂಡರ ನಡುವೆ ವಾಕ್ಸಮರ ತಾರಕಕ್ಕೇರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


