ರಾಜ್ಯ

ರಾಜ್ಯದಲ್ಲಿ ಇಂದಿನಿಂದ ಜು.15ರವರೆಗೆ ಭಾರೀ ಮಳೆ ಸಾಧ್ಯತೆ: ಹಲವೆಡೆ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಹಲವೆಡೆ ಜು.15ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ಹಲವೆಡೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಇಂದಿನಿಂದ ಜು.15ರವರೆಗೆ ಭಾರೀ ಮಳೆ ಸಾಧ್ಯತೆ: ಹಲವೆಡೆ ರೆಡ್ ಅಲರ್ಟ್
ಸಂಗ್ರಹ ಚಿತ್ರ
Published On :

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಹಲವೆಡೆ ಜು.15ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ಹಲವೆಡೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

ರಾಜ್ಯಾದ್ಯಂತ ಜು.15ರವರೆಗೆ ವ್ಯಾಪಕ ಮಳೆಯಾಗಲಿದ್ದು, ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಕೆಲವೆಡೆ ಗಾಳಿ, ಗುಡುಗುಸಹಿತ ಅತ್ಯಂತ ಹೆಚ್ಚು ಮಳೆ ಆಗುವ ಸಾಧ್ಯತೆ ಇದೆ. ಹೀಗಾಗಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜು.11ರಂದು ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಜು.12 ಮತ್ತು 13ರಂದು ‘ರೆಡ್‌ ಅಲರ್ಟ್‌’ ನೀಡಲಾಗಿದೆ ಎಂದು ತಿಳಿಸಿದೆ.

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಲಕ್ಷಣ ಕಂಡು ಬಂದಿದೆ. ಜು.11ರ ನಂತರ ಕರಾವಳಿ ಜಿಲ್ಲೆಗಳಲ್ಲಿ ಮಳೆ ಅರ್ಭಟ ತುಸು ಕಡಿಮೆ ಆಗಲಿದೆ. ಈ ಭಾಗದ ಮೂರು ಜಿಲ್ಲೆಗಳ ಕೆಲವೆಡೆ 12 ಸೆಂ.ಮೀ.ಗಿಂತ ಹೆಚ್ಚು ಮಳೆ ಬೀಳಲಿದ್ದು, ಜು.12ರಿಂದ 14ರವರೆಗೆ ‘ಆರೆಂಜ್‌ ಅಲರ್ಟ್‌’ ಕೊಡಲಾಗಿದೆ. ಕರಾವಳಿಯಲ್ಲಿ ಗಂಟೆಗೆ 45-55 ಕಿ.ಮೀ.ವೇಗದಲ್ಲಿ ಗಾಳಿ ಬೀಸುವುದರಿಂದ ಮೀನುಗಾರಿಕೆಗೆ ಸಮುದ್ರಕ್ಕಿಳಿಯದಂತೆ ಸೂಚಿಸಲಾಗಿದೆ ಎಂದು ವಿವರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.