ರಾಜ್ಯದ 19ನೇ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ
ತಾವರ್ ಚಂದ್ ಗೆಹ್ಲೋಟ್ ಕರ್ನಾಟಕದ ನೂತನ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದರು

ಬೆಂಗಳೂರು: ತಾವರ್ ಚಂದ್ ಗೆಹ್ಲೋಟ್ ಕರ್ನಾಟಕದ ನೂತನ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದರು
ಗೆಹ್ಲೋಟ್ ರಾಜ್ಯದ 19ನೇ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಅಭಯ್ ಶ್ರೀನಿವಾಸ್ ಓಕಾ ಅವರು ತಾವರ್ ಚಂದ್ ಗೆಹ್ಲೋಟ್‌ಗೆ ಪ್ರಮಾಣವಚನ ಬೋಧಿಸಿದ್ದಾರೆ.
ರಾಜಭವನದಲ್ಲಿ ನಡೆದ ಕಾರ್ಯಕ್ರ್ಮದಲ್ಲಿ ನಿರ್ಗಮಿತ ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಬಿ,ಎಸ್, ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವರಾದ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಆರ್. ಅಶೋಕ್, ಸಂಸದೆ ಸುಮಲತಾ ಅಂಬರೀಶ್ ಇನ್ನೂ ಹಲವಾರು ಮಂದಿ ಬಾಗವಹಿಸಿದ್ದರು.
ಕೇಂದ್ರದಲ್ಲಿ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವರಾಗಿದ್ದ ಗೆಹ್ಲೋಟ್ ಈ ಹಿಂದೆ ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ಸಹ ಸೇವೆ ಸಲ್ಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


