ರಾಜ್ಯ

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 319 ಸೇರಿ ಇಂದು 1,386 ಪ್ರಕರಣ ಪತ್ತೆ; 61 ಸಾವು!

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು ಇಂದು 1,386 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,72,684ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 319 ಸೇರಿ ಇಂದು 1,386 ಪ್ರಕರಣ ಪತ್ತೆ; 61 ಸಾವು!
ಸಂಗ್ರಹ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು ಇಂದು 1,386 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,72,684ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 61 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 35,896ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.   

ಬೆಂಗಳೂರಿನಲ್ಲಿ ಇಂದು 319 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,19,697ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 9 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು 3,204 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,01,907ಕ್ಕೆ ಏರಿಕೆಯಾಗಿದೆ. ಇನ್ನು 34,858 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,09,399 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,386 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.26ಕ್ಕೆ ಇಳಿದಿದೆ.

ರಾಜ್ಯದ ಇತರ ಜಿಲ್ಲೆಗಳಾದ ಬೆಳಗಾವಿ 32, ಚಿಕ್ಕಮಗಳೂರು 46, ದಕ್ಷಿಣ ಕನ್ನಡ 126, ಹಾಸನ 108, ಮೈಸೂರು 177, ಶಿವಮೊಗ್ಗ 68, ತುಮಕೂರು 69, ಉಡುಪಿ 66 ಪ್ರಕರಣಗಳು ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.