ಹುಬ್ಬಳ್ಳಿ: ಬಿಜೆಪಿ ನಾಯಕನ ಸಂಬಂಧಿ ಹತ್ಯೆ, ಕೇವಲ 3 ಗಂಟೆಗಳಲ್ಲಿ ಆರೋಪಿಗಳು ಅಂದರ್!
ಭಾರತೀಯ ಜನತಾ ಪಕ್ಷ ನಾಯಕನ ಸೋದರ ಸಂಬಂಧಿಯನ್ನು ಹತ್ಯೆ ಮಾಡಿದ್ದ ಆರೋಪಿಗಳನ್ನು ಹುಬ್ಬಳ್ಳಿ ಪೋಲೀಸರು ಕೇವಲ ಮೂರು ಗಂಟೆಗಳಲ್ಲಿ ಬಂಧಿಸಿದ್ದಾರೆ.

ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷ ನಾಯಕನ ಸೋದರ ಸಂಬಂಧಿಯನ್ನು ಹತ್ಯೆ ಮಾಡಿದ್ದ ಆರೋಪಿಗಳನ್ನು ಹುಬ್ಬಳ್ಳಿ ಪೋಲೀಸರು ಕೇವಲ ಮೂರು ಗಂಟೆಗಳಲ್ಲಿ ಬಂಧಿಸಿದ್ದಾರೆ.
ಬಿಜೆಪಿಯ ರೈತ ಮೋರ್ಚಾದ ಈಶ್ವರಗೌಡ ಪಾಟೀಲ ಅವರ ಸೋದರ ಸಂಬಂಧಿ ಎನ್ನಲಾದ ಅಭಿಷೇಕ್ ಪಾಟೀಲ್ ನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಪ್ರವೀಣ್ ಬೇವಿನ ಕಟ್ಟಿ, ಸಾಯಿ ಉಣಕಲ್ ಹಾಗೂ ಕುಮಾರ್ ಇದ್ದಲಗಿ ಎಂಬುವವರನ್ನು ಪೋಲೀಸರು ಬಂಧಿಸಿದ್ದಾರೆ.
ಕೆಲ ದಿನಗಳ ಹಿಂದೆ ಆರೋಪಿ ಪ್ರವೀಣ್ ಬೇವಿನ ಕಟ್ಟಿ, ಹತ್ಯೆಗೀಡಾದ ಅಭಿಷೇಕ್ ಜತೆ ಜಗಳವಾಡಿದ್ದ ಅಲ್ಲದೆ ಮನೆ ಮುಂದಿದ್ದ ಕಾರಿನ ಗಾಜು ಒಡೆದಿದ್ದ. ಭಾನುವಾರ ಮತ್ತೆ ಆತ ತನ್ನ ಸ್ನೇಹಿತನೊಂದಿಗೆ ಆಗಮಿಸಿ ಅಭಿಷೇಕ್ ನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಹಲ್ಲೆಯಿಂದಾಗಿ ತೀವ್ರ ಗಾಯಗೊಂಡಿದ್ದ ಅಭಿಷೇಕ್ ನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವನು ಸಾವನ್ನಪ್ಪಿದ್ದಾನೆ.
ಇದೀಗ ಅಶೋಕ ನಗರ ಠಾಣೆ ಪೋಲೀಸರು ತನಿಖೆ ಮುಂದುವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


