ಹಾಯ್ ಬೆಂಗಳೂರು ಮಾಜಿ ಸಂಪಾದಕ ಸುನೀಲ್ ಹೆಗ್ಗರವಳ್ಳಿ ಹೃದಯಘಾತದಿಂದ ನಿಧನ
ಹಿರಿಯ ಕ್ರೈಮ್ ವರದಿಗಾರ, 43 ವರ್ಷದ ಸುನೀಲ್ ಹೆಗ್ಗರವಳ್ಳಿ ಅಕಾಲಿಕ ಸಾವನ್ನಪ್ಪಿದ್ದಾರೆ.

ಚಿಕ್ಕಮಗಳೂರು: ಹಿರಿಯ ಕ್ರೈಮ್ ವರದಿಗಾರ, 43 ವರ್ಷದ ಸುನೀಲ್ ಹೆಗ್ಗರವಳ್ಳಿ ಅಕಾಲಿಕ ಸಾವನ್ನಪ್ಪಿದ್ದಾರೆ.
ಹಾಯ್ ಬೆಂಗಳೂರು ಪತ್ರಿಕೆಯ ಮೂಲಕ ತಮ್ಮ ವೃತ್ತಿಜೀವನವನ್ನುಆರಂಭಿಸಿದ ಸುನೀಲ್ ಹೆಗ್ಗರವಳ್ಳಿ, ತಮ್ಮ ಸ್ವಂತ ಜಿಲ್ಲೆಯಾದ ಚಿಕ್ಕಮಗಳೂರಿನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಹಾಯ್ ಬೆಂಗಳೂರು ಪತ್ರಿಕೆಯ ವರದಿಗಾರರಾಗಿ ಅವರು ಮಾಡಿದ ಸಾಕಷ್ಟು ವರದಿಗಳು ದೊಡ್ಡ ಸಂಚಲನವನ್ನೇ ಮೂಡಿಸಿದ್ದವು. ರವಿ ಬೆಳಗೆರೆಯವರ ಅತ್ಯಾಪ್ತನಾಗಿದ್ದುಕೊಂಡು ನಂತರ ರವಿ ಬೆಳಗೆರೆ ಅವರ ಅನಾರೋಗ್ಯದ ಸನ್ನಿವೇಶದಲ್ಲಿ ಪತ್ರಿಕೆಯನ್ನು ಸಂಪಾದಕನಾಗಿ ಮುನ್ನಡೆಸಿದ್ದರು.
ಆದರೆ ಶೂಟೌಟ್ ವಿವಾದದ ಸನ್ನಿವೇಶದಲ್ಲಿ ರವಿ ಬೆಳಗೆರೆ ಅವರ ಮೇಲೆಯೇ ಸುಪಾರಿ ಆರೋಪ ಮಾಡಿ ಹಾಯ್ ಬೆಂಗಳೂರು ಕಚೇರಿಯಿಂದ ಹೊರಬಿದ್ದಿದ್ದು ರಾಜ್ಯದಲ್ಲಿ ಸುದ್ದಿಯಾಗಿದ್ದರು. ನಂತರ ಚಾರ್ಲಿ ಟೈಮ್ಸ್ ಕ್ರೈಮ್ ಪೇಪರ್ ಶುರುಮಾಡಿದ್ದರು.
ಯೂ ಟ್ಯೂಬ್ ಚಾನೆಲ್ ಕೂಡ ಆರಂಭಿಸಿ ಗಮನ ಸೆಳೆದಿದ್ದರು. ಅವರ ಅಕಾಲಿಕ ನಿಧನಕ್ಕೆ ಪತ್ರಕರ್ತ ಸಮೂಹ ವಿಷಾದ-ಸಂತಾಪ ವ್ಯಕ್ತಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


