ಗ್ರಾಮೀಣ ಪ್ರದೇಶಗಳಲ್ಲಿ ಇಂಟರ್ ನೆಟ್ ಸಮಸ್ಯೆ ಪರಿಹಾರಕ್ಕೆ ಕ್ರಮ: ಸುರೇಶ್ ಕುಮಾರ್
ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳ ಕಲಿಕಾ ನಿರಂತರತೆಗೆ ಅನುಕೂಲವಾಗುವಂತೆ ಅಂತರ್ಜಾಲ ನೆಟ್-ವರ್ಕ್ ಸಮಸ್ಯೆ ಪರಿಹರಿಸುವ ಕುರಿತು ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಸುರೇಶ್ ಕುಮಾರ್ ಅವರು ಸೋಮವಾರ ಚರ್ಚೆ ನಡೆಸಿದರು.

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳ ಕಲಿಕಾ ನಿರಂತರತೆಗೆ ಅನುಕೂಲವಾಗುವಂತೆ ಅಂತರ್ಜಾಲ ನೆಟ್-ವರ್ಕ್ ಸಮಸ್ಯೆ ಪರಿಹರಿಸುವ ಕುರಿತು ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಸುರೇಶ್ ಕುಮಾರ್ ಅವರು ಸೋಮವಾರ ಚರ್ಚೆ ನಡೆಸಿದರು.
ಮಾಹಿತಿ ತಂತ್ರಜ್ಞಾನ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ್ ಮತ್ತು ತಮ್ಮ ಸೂಚನೆಯಂತೆ ರಾಜ್ಯದಲ್ಲಿ ಮೊಬೈಲ್ ನೆಟ್-ವರ್ಕ್ ಪೂರೈಕೆದಾರ ಕಂಪನಿಗಳ ಜೊತೆ ಮಾಹಿತಿ ತಂತ್ರಜ್ಞಾನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ ಚರ್ಚಿಸಿದ್ದು, ಅವರೆಲ್ಲಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮುಖ್ಯ ಕಾರ್ಯದರ್ಶಿ ಸಚಿವರ ಗಮನಕ್ಕೆ ತಂದಿದ್ದಾರೆ.
ಮಳೆಗಾಲ ಆಗಿರುವುದರಿಂದ ಮಲೆನಾಡು ಪ್ರದೇಶ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮೊಬೈಲ್ ನೆಟ್-ವರ್ಕ್ ಸಮಸ್ಯೆಯಿಂದಾಗಿ ಮಕ್ಕಳ ಪರ್ಯಾಯ ಬೋಧನಾ ಕ್ರಮಗಳಾದ ಆನ್‌ಲೈನ್ ಬೋಧನಾ ಕ್ರಮ ಇಲ್ಲವೇ ದೂರದರ್ಶನ ಚಂದನಾ ಪಾಠಗಳಿಗೆ ತೊಂದರೆ ಆಗಿದೆ. ಈ ಕುರಿತು ತ್ವರಿತವಾಗಿ ಗಮನ ಹರಿಸುವುದರ ಅಗತ್ಯವಿದ್ದು, ಮಕ್ಕಳ ಬೋಧನಾ ವಿಧಾನದ ಗುಣಮಟ್ಟ ಕಾಪಾಡಬೇಕಾಗಿದೆ’ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೋವಿಡ್ ಕಾರಣ ಶಾಲೆಗಳ ಆರಂಭ ವಿಳಂಬವಾಗುತ್ತಿರುವ ಕಾರಣ ಪ್ರಸ್ತುತ ಪರ್ಯಾಯ ಬೋಧನಾ ಕ್ರಮಗಳನ್ನೇ ಅವಲಂಬಿಸಬೇಕಾಗಿದೆ. ಎಲ್ಲ ಮಕ್ಕಳಿಗೂ ಉತ್ತಮ ಗುಣಮಟ್ಟದ ಬೋಧನೆ ದೊರಕಿಸಿಕೊಡುವ ನಿಟ್ಟಿನಲ್ಲಿ ನಾವು ಆನ್‌ಲೈನ್ ವ್ಯವಸ್ಥೆಯನ್ನೇ ನೆಚ್ಚಿಕೊಂಡಿರುವಂಥ ಸಂದರ್ಭದಲ್ಲಿ ಮೊಬೈಲ್ ನೆಟ್-ವರ್ಕ್ ಬಲಪಡಿಸುವುದರಿಂದ ಗ್ರಾಮೀಣ
ಪ್ರದೇಶದ ಮಕ್ಕಳಿಗೂ ಎಲ್ಲರಂತೆ ಶಿಕ್ಷಣ ದೊರೆತು ಕಲಿಕಾ ನಿರಂತರತೆಯಲ್ಲಿ ಅವರನ್ನು ತೊಡಗಿಸಬೇಕಾಗಿದೆ’ ಎಂದು ಸಚಿವರು ತಿಳಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡಾ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದು, ಸಮರೋಪಾದಿಯಲ್ಲಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದ್ದಾರೆಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ದೂರದರ್ಶನ ಅಥವಾ ಮೊಬೈಲ್ ಇಲ್ಲದ ವಿದ್ಯಾರ್ಥಿಗಳಿಗೆ ಆನ್‌ಲೈನ್ ಶಿಕ್ಷಣ ಒದಗಿಸಲು ರಾಜ್ಯದಲ್ಲಿರುವ 5,766 ಗ್ರಾಮ ಪಂಚಾಯಿತಿಯ ಗ್ರಂಥಾಲಯಗಳಲ್ಲಿ ಡಿವೈಸರ್ ಅಳವಡಿಸುವ ಪ್ರಕ್ರಿಯೆ ನಡೆಯುತ್ತಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಗ್ರಾಮೀಣ ಮಕ್ಕಳ ಶಿಕ್ಷಣ ಮುಂದುವರಿಕೆ ಮತ್ತು ಕಲಿಕಾ ನಿರಂತರತೆಗೆ ಅನುಕೂಲವಾಗುವಂಥ ಕ್ರಮಗಳನ್ನು ಕೈಗೊಳ್ಳಲು ಇಲಾಖೆ ಮುಂದಾಗಿದೆ’ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


