ಚಿತ್ರದುರ್ಗ: ಒಂದೇ ಕುಟುಂಬದ ಮೂವರು ಸಾವು, ಇಬ್ಬರು ಗಂಭೀರ
ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಇಸಾಮುದ್ರ ಲಂಬಾಣಿಹಟ್ಟಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ಚಿತ್ರದುರ್ಗ: ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಇಸಾಮುದ್ರ ಲಂಬಾಣಿಹಟ್ಟಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
ತಿಪ್ಪನಾಯ್ಕ (45), ಗುಂಡಿಬಾಯಿ (80), ಸುಧಾಬಾಯಿ (40) ಮೃತಪಟ್ಟಿದ್ದು, ರಾಹುಲ್ (19) ಮತ್ತು ರಮ್ಯಾ (16) ಗಂಭೀರವಾಗಿದ್ದಾರೆ. ವಿಷ ಆಹಾರ ಸೇವನೆ ಮಾಡಿರುವ ಅನುಮಾನ ವ್ಯಕ್ತವಾಗಿದೆ.
ಕುಟುಂಬದ ಸದಸ್ಯರೆಲ್ಲರೂ ಸೋಮವಾರ ರಾತ್ರಿ 10 ಗಂಟೆಗೆ ಊಟ ಮಾಡಿ ಮಲಗಿದ್ದಾರೆ. ರಾತ್ರಿ ಸುಮಾರು 11-30 ಕ್ಕೆ ವಾಂತಿ ಮಾಡಿಕೊಂಡಿದ್ದಾರೆ. ನೆರೆಹೊರೆಯವರು ತಕ್ಷಣ ಅವರನ್ನು ಭರಮಸಾಗರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ. ಮಾರ್ಗ ಮಧ್ಯದಲ್ಲಿ ಗುಂಡಿಬಾಯಿ ಮತ್ತು ಸುಧಾಬಾಯಿ ಮೃತಪಟ್ಟಿದ್ದಾರೆ. ತಿಪ್ಪನಾಯ್ಕ ದಾವಣಗೆರೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಕಸ್ಮಿಕ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿಷಾಹಾರ ಸೇವನೆಯೇ ಸಾವಿಗೆ ಕಾರಣ ಎಂದು ಅನುಮಾನಿಸಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


