ಚಿತ್ರದುರ್ಗ: ವಿಷಾಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರ ಸಾವು
ವಿಷಾಹಾರ ಸೇವಿಸಿ ಒಂದೇ ಕುಟುಂಬದ ನಾಲ್ಕು ಮಂದಿ ಸಾವನ್ನಪ್ಪಿರುವ ಭೀಕರ ಘಟನೆ ಚಿತ್ರದುರ್ಗದಲ್ಲಿ ವರದಿಯಾಗಿದೆ.

ಚಿತ್ರದುರ್ಗ: ವಿಷಾಹಾರ ಸೇವಿಸಿ ಒಂದೇ ಕುಟುಂಬದ ನಾಲ್ಕು ಮಂದಿ ಸಾವನ್ನಪ್ಪಿರುವ ಭೀಕರ ಘಟನೆ ಚಿತ್ರದುರ್ಗದಲ್ಲಿ ವರದಿಯಾಗಿದೆ.
ಚಿತ್ರದುರ್ಗದ ಭರಮಸಾಗರ ಹೋಬಳಿಯ ಇಸಾಮುದ್ರ ಹೊಸಹಟ್ಟಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ ಈ ಘಟನೆ ನಡೆದಿದ್ದು, ವಿಷಪೂರಿತ ಆಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು ತಿಪ್ಪಾನಾಯ್ಕ (46), ತಾಯಿ ಗುಂಡಿಬಾಯಿ (80), ಪತ್ನಿ ಸುಧಾಬಾಯಿ (43) ಹಾಗೂ ಪುತ್ರಿ ರಮ್ಯಾ (16) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಪುತ್ರಿ ರಕ್ಷಿತಾ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಪುತ್ರ ರಾಹುಲ್ (18) ನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಏನಿದು ಘಟನೆ?
ಸೋಮವಾರ ರಾತ್ರಿ ಊಟ ಮಾಡಿದ ತಿಪ್ಪಾನಾಯ್ಕ ಕುಟುಂಬದ ಐವರು ವ್ಯಕ್ತಿಗಳು ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು. ಕೂಡಲೇ ಅವರನ್ನು ಸ್ಥಳೀಯರು ಚಿತ್ರದುರ್ಗದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ಸುಧಾ ಬಾಯಿ ಮತ್ತು ಗುಂಡಿ ಬಾಯಿ ನಿಧನರಾದರು. ನಂತರ ತಿಪ್ಪಾ ನಾಯಕ್, ಪುತ್ರಿ ರಮ್ಯಾ ಮತ್ತು ರಾಹುಲ್ ಅವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಮಾರ್ಗ ಮಧ್ಯೆ ತಂದೆ ತಿಪ್ಪಾ ನಾಯಕ್ ನಿಧನರಾದರೆ, ರಮ್ಯಾ ಮಂಗಳವಾರ ರಾತ್ರಿ ಆಸ್ಪತ್ರೆಯಲ್ಲಿ ನಿಧನರಾದರು. ಇನ್ನೊಬ್ಬ ವ್ಯಕ್ತಿ ರಾಹುಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಅಂತೆಯೇ ಮತ್ತೋರ್ವ ಪುತ್ರ ರಕ್ಷಿತಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿದ ಡಿಎಚ್‌ಒ ಡಾ.ರಂಗನಾಥ್ ಮತ್ತು ತಂಡ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಲ್ಯಾಬ್‌ಗೆ ಕಳುಹಿಸಿದರು. ಬಳಿಕ ಅದರ ವರದಿ ಲಭ್ಯವಾಗಿದ್ದು, ವಿಷಾಹಾರ ಸೇವನೆಯಿಂದ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಂತೆಯೇ ಅವರು ತಿಂದ ಆಹಾರ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ವಿಧಿವಿಜ್ಞಾನ ಪರೀಕ್ಷೆಗಳು ಮತ್ತು ತನಿಖೆ ನಡೆಯುತ್ತಿದೆ ಎಂದು ಎಸ್‌ಪಿ ಜಿ ರಾಧಿಕಾ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


