ಕಾಸರಗೋಡು ಗ್ರಾಮಗಳ ಹೆಸರು ಬದಲಾಯಿಸುತ್ತಿಲ್ಲ: ಸಿದ್ದರಾಮಯ್ಯ ಪತ್ರಕ್ಕೆ ಕೇರಳ ಸಿಎಂ ಸ್ಪಷ್ಟನೆ
ಕಾಸರಗೋಡು ಜಿಲ್ಲೆಯ ಗ್ರಾಮಗಳ ಹೆಸರುಗಳನ್ನು ಬದಲಾಯಿಸುವ ಸಂಬಂಧ ಯಾವುದೇ ನಿರ್ಧಾರವನ್ನು ಕೈಗೊಳ್ಳಲಾಗಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಕಾಸರಗೋಡು ಜಿಲ್ಲೆಯ ಗ್ರಾಮಗಳ ಹೆಸರುಗಳನ್ನು ಬದಲಾಯಿಸುವ ಸಂಬಂಧ ಯಾವುದೇ ನಿರ್ಧಾರವನ್ನು ಕೈಗೊಳ್ಳಲಾಗಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸ್ಪಷ್ಟಪಡಿಸಿದ್ದಾರೆ.
ಈ ಸಂಬಂಧ ರಾಜ್ಯದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬರೆದಿದ್ದ ಪತ್ರಕ್ಕೆ ಪ್ರತಿಕ್ರಿಯೆ ನೀಡಿ ಪತ್ರ ಬರೆದಿರುವ ಅವರು, ಕಾಸರಗೋಡು ಜಿಲ್ಲೆಯ ಗ್ರಾಮಗಳ ಹೆಸರು ಬದಲಾಯಿಸುವ ಕುರಿತು ಯಾವುದೇ ನಿರ್ಧಾರಗಳನ್ನೂ ಕೈಗೊಳ್ಳಲಾಗಿಲ್ಲ. ಉಭಯ ರಾಜ್ಯಗಳ ಜನರ ನಡುವಿನ ಸೌಹಾರ್ದತೆಯನ್ನು ಉಳಿಸಿ, ಬೆಳೆಸುವ ಸಂಬಂಧ ತಾವು ವ್ಯಕ್ತಪಡಿಸಿರುವ ಅಭಿಪ್ರಾಯಗಳನ್ನು ನಾವು ಗೌರವಿಸುತ್ತೇವೆ ಎಂದು ಹೇಳಿದ್ದಾರೆ.
ಕೋವಿಡ್ ಸಾಂಕ್ರಾಮಿಕದಿಂದಾಗಿ ನಮ್ಮ ರಾಜ್ಯದ ಎಲ್ಲ ಶಾಲೆಗಳನ್ನು ಮುಚ್ಚಲಾಗಿದ್ದು, ಆನ್‍ಲೈನ್ ತರಗತಿಗಳು ನಡೆಯುತ್ತಿವೆ. ಕನ್ನಡ ಮಾಧ್ಯಮ ತರಗತಿಗಳನ್ನು ಸ್ಥಳೀಯ ಕೆಬಲ್ ಚಾನೆಲ್‍ಗಳ ಮೂಲಕ ಕೈಗೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


