ರಾಜ್ಯ

ಕೊರೊನಾದಿಂದ ಮೃತಪಟ್ಟ ರೈತರ 1 ಲಕ್ಷ ರೂ. ಸಾಲ ಮನ್ನಾ: ಸಚಿವ ಎಸ್.ಟಿ. ಸೋಮಶೇಖರ್

ಕೋವಿಡ್ ಸೋಂಕಿನಿಂದಾಗಿ ಮೃತಪಟ್ಟ ರೈತರ ಸಾಲದಲ್ಲಿ 1 ಲಕ್ಷ ರೂ ವನ್ನು ಮನ್ನಾ ಮಾಡಲಾಗುತ್ತದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.

ಕೊರೊನಾದಿಂದ ಮೃತಪಟ್ಟ ರೈತರ 1 ಲಕ್ಷ ರೂ. ಸಾಲ ಮನ್ನಾ: ಸಚಿವ ಎಸ್.ಟಿ. ಸೋಮಶೇಖರ್
ಸಚಿವ ಎಸ್ ಟಿ ಸೋಮಶೇಖರ್
Published On :

ಮಂಗಳೂರು: ಕೋವಿಡ್ ಸೋಂಕಿನಿಂದಾಗಿ ಮೃತಪಟ್ಟ ರೈತರ ಸಾಲದಲ್ಲಿ 1 ಲಕ್ಷ ರೂ ವನ್ನು ಮನ್ನಾ ಮಾಡಲಾಗುತ್ತದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.

ಮಂಗಳೂರಲ್ಲಿ  ಈ ಬಗ್ಗೆ ಮಾಹಿತಿ ನೀಡಿದ ಅವರು, 'ಕೊವಿಡ್‌ನಿಂದ ಮೃತಪಟ್ಟ ರೈತರ ಸಾಲಮನ್ನಾಗೆ ಕರ್ನಾಟಕ ಸರ್ಕಾರ ತೀರ್ಮಾನ ಮಾಡಿದ್ದು, ಕೊರೊನಾದಿಂದ ಮೃತಪಟ್ಟ ರೈತರ ಸಾಲದ ಮೊತ್ತದಲ್ಲಿ 1 ಲಕ್ಷ ರೂಪಾಯಿ ಮನ್ನಾ ಮಾಡಲು ಸರ್ಕಾರ ನಿರ್ಧಾರ ಮಾಡಿದೆ ಎಂದು ಮಾಹಿತಿ ನೀಡಿದರು.

'ಕೊವಿಡ್‌ನಿಂದ ರಾಜ್ಯದಲ್ಲಿ 10,400 ಸಾಲಗಾರ ರೈತರು ಮೃತಪಟ್ಟಿದ್ದಾರೆ. ಇವರ ಸಾಲದ ಮೊತ್ತದಲ್ಲಿ ತಲಾ 1 ಲಕ್ಷ ರೂಪಾಯಿ ಮನ್ನಾ ಮಾಡಲಾಗುವುದು. ಇದರಿಂದಾಗಿ ಸರ್ಕಾರಕ್ಕೆ 81 ಕೋಟಿ ರೂಪಾಯಿ ಹೊರೆಯಾಗಲಿದೆ. ಅಪೆಕ್ಸ್, ಡಿಸಿಸಿ ಬ್ಯಾಂಕ್ & ಪ್ಯಾಕ್ಸ್ ಗಳಲ್ಲಿ ಸಾಲ ಪಡೆದಿದ್ದ ಕೊರೋನಾದಿಂದ  ಮೃತಪಟ್ಟಿರುವ 10187 ರೈತರ 79.47 ಕೋಟಿ ರೂಪಾಯಿ ಸಾಲ ಮನ್ನಾ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಿಂತನೆ ನಡೆಸಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.