ಮೈಸೂರಿನಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ದಲಿತ ಸಪ್ಲೈಯರ್ ಮೇಲೆ ಹಲ್ಲೆ ಆರೋಪ: ತನಿಖೆಗೆ ಗೃಹ ಸಚಿವರ ಆದೇಶ
ಮೈಸೂರಿನಲ್ಲಿ ಸಂದೇಶ್ ಪ್ರಿನ್ಸ್ ನಾಗರಾಜ್ ಹೊಟೇಲ್ ನಲ್ಲಿ ನಟ ದರ್ಶನ್ ಮತ್ತು ಅವರ ಸ್ನೇಹಿತರು ದಲಿತ ಸಪ್ಲೈಯರ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತನಿಖೆಗೆ ಆದೇಶ ನೀಡಿದ್ದಾರೆ.

ಬೆಂಗಳೂರು: ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ವಂಚನೆ ಪ್ರಕರಣ ಕೇಸು ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಮೈಸೂರಿನಲ್ಲಿ ಸಂದೇಶ್ ಪ್ರಿನ್ಸ್ ನಾಗರಾಜ್ ಹೊಟೇಲ್ ನಲ್ಲಿ ನಟ ದರ್ಶನ್ ಮತ್ತು ಅವರ ಸ್ನೇಹಿತರು ದಲಿತ ಸಪ್ಲೈಯರ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತನಿಖೆಗೆ ಆದೇಶ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಪ್ರಕರಣ ಸಂಬಂಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಮೈಸೂರು ಪೊಲೀಸರಿಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರು ಆದೇಶ ಹೊರಡಿಸಿದ್ದಾರೆ. ದರ್ಶನ್ ಮತ್ತು ಗ್ಯಾಂಗ್ ದಲಿತ ಸಪ್ಲೈಯರ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಇಂದು ಬೆಳಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ದೂರು ನೀಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಧ್ಯಮದವರು ಪ್ರತಿಕ್ರಿಯೆ ಕೇಳಿದಾಗ ನಿರ್ಮಾಪಕ ಮತ್ತು ಉದ್ಯಮಿ ಸಂದೇಶ್ ನಾಗರಾಜ್ ನನಗೆ ಟಿವಿ ನೋಡಿದ ಮೇಲೆಯೇ ಗೊತ್ತಾಗಿದ್ದು, ಹಲ್ಲೆ ನಡೆದ ಪ್ರಕರಣ ನನ್ನ ಗಮನಕ್ಕೆ ಬಂದೇ ಇಲ್ಲ, ನನಗೆ ಯಾರು ದೂರು ನೀಡಲೂ ಇಲ್ಲ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


