ರಾಜ್ಯಕ್ಕೆ ತಿಂಗಳಿಗೆ ಕನಿಷ್ಠ 1.5 ಕೋಟಿ ಡೋಸ್ ಕೋವಿಡ್ ಲಸಿಕೆ ಒದಗಿಸಲು ಪ್ರಧಾನಿಗೆ ಯಡಿಯೂರಪ್ಪ ಮನವಿ
ತಿಂಗಳಿಗೆ ಕನಿಷ್ಠ 1.5 ಕೋಟಿ ಡೋಸ್ ಕೋವಿಡ್ ಲಸಿಕೆಗಳನ್ನು ರಾಜ್ಯಕ್ಕೆ ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು.

ಬೆಂಗಳೂರು: ತಿಂಗಳಿಗೆ ಕನಿಷ್ಠ 1.5 ಕೋಟಿ ಡೋಸ್ ಕೋವಿಡ್ ಲಸಿಕೆಗಳನ್ನು ರಾಜ್ಯಕ್ಕೆ ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು.
ಪ್ರಧಾನಿ ನರೇಂದ್ರ ಮೋದಿ ಕೋವಿಡ್ -19 ಪರಿಸ್ಥಿತಿ ಕುರಿತಂತೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ, ರಾಜ್ಯದಲ್ಲಿ ಕೋವಿಡ್ -19 ಪ್ರಕರಣಗಳು ಕಡಿಮೆಯಾಗುತ್ತಿದ್ದು, 1900ಕ್ಕೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಸುಮಾರು 400 ಕ್ಕೆ ಬಂದಿದೆ. ಪಾಸಿಟಿವಿಟಿ ದರ ಶೇಕಡಾ 1.42 ರಷ್ಟಿದ್ದು, ಮರಣ ಪ್ರಮಾಣ ಶೇ.1.25 ರಷ್ಟಿದೆ ಎಂದು ವಿವರಿಸಿದರು.
ಕೋವಿಡ್-19 ಪಾಸಿಟಿವಿಟಿ ದರ, ಪ್ರಕರಣಗಳ ಸಂಖ್ಯೆ ಹಾಗೂ ತಾಂತ್ರಿಕಾ ಸಲಹಾ ಸಮಿತಿಯ ಅಭಿಪ್ರಾಯವನ್ನು ಆಧರಿಸಿ, ನಿರ್ಬಂಧಗಳನ್ನು ವಿಧಿಸಲು ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ಕೋವಿಡ್ ಸೂಕ್ತ ನಡವಳಿಕೆಯನ್ನು ಖಾತರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ಸಹ ನೀಡಲಾಗಿದೆ ಎಂದು ಅವರು ತಿಳಿಸಿದರು.
ಪ್ರಸ್ತುತ ಕೋವಿಡ್ ಮೂರನೇ ಅಲೆ ಎದುರಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, ಎಲ್ಲಾ ಆರೋಗ್ಯ ಸೇವಾ ಸಂಸ್ಥೆಗಳಲ್ಲಿ ಆಕ್ಸಿಜನೇಟೆಡ್ ಬೆಡ್ ಗಳು, ವೆಂಟಿಲೇಟರ್ ಹಾಸಿಗೆ ಮತ್ತು ಮಕ್ಕಳ ಐಸಿಯು ಸೌಲಭ್ಯವನ್ನು ಹೆಚ್ಚಿಸಲಾಗುತ್ತಿದೆ. ವೈದ್ಯರು, ಸ್ಟಾಫ್ ನರ್ಸ್, ಪ್ರಯೋಗಾಲಯ ತಂತ್ರಜ್ಞರ ಸೇವೆ ಒದಗಿಸಲಾಗುತ್ತಿದೆ ಎಂದರು.
ಕೋವಿಡ್ ಚಿಕಿತ್ಸೆಗೆ ಅಗತ್ಯ ಪರಿಕರಗಳನ್ನು ಸಹ ಸಾಕಷ್ಟು ಸಂಖ್ಯೆಯಲ್ಲಿ ಖರೀದಿಸಲಾಗುತ್ತಿದೆ. ಹೊಸ ಆರ್ ಟಿ- ಪಿಸಿಆರ್ ಪ್ರಯೋಗಾಲಯಗಳ ಸ್ಥಾಪನೆ ಹಾಗೂ ಜಿನೋಮ್ ಸೀಕ್ವೆನ್ಸಿಂಗ್ ಲ್ಯಾಬೊರೇಟರಿಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದ ಮುಖ್ಯಮಂತ್ರಿ, ಮುಂದಿನ ದಿನಗಳಲ್ಲಿ ಮೂರನೇ ಅಲೆ ಎದುರಿಸಲು ಕೇಂದ್ರ ಸರ್ಕಾರದಿಂದ ಲಸಿಕೆ ಹಂಚಿಕೆ ಹೆಚ್ಚಳ, 800 ನಿಯೋ- ನೇಟಲ್ ಮತ್ತು ಪಿಡಿಯಾಟ್ರಿಕ್ ವೆಂಟಿಲೇಟರ್ ಗಳನ್ನು ಪಿಎಂ-ಕೇರ್ಸ್ ಅಡಿ ಒದಗಿಸುವಂತೆ ಮನವಿ ಮಾಡಿದರು.
ತಾಲೂಕ್ ಆಸ್ಪತ್ರೆಗಳಿಗೆ 40 ಪಿಎಸ್ ಎ ಆಕ್ಸಿಜನ್ ಉತ್ಪಾದನಾ ಘಟಕಗಳ ಹಂಚಿಕೆ ಮಾಡುವಂತೆ ಹಾಗೂ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಹಂಚಿಕೆಯ ವಿಕೇಂದ್ರಿಕರಣ ಮತ್ತು ಮೈಕೊರ್ಮೈಕೂಸಿಸ್ ಆಂಫೊಟೆರಿಸಿನ್ -ಬಿ ಮತ್ತು ಮಕ್ಕಳಿಗೆ ಐವಿಐಜಿ ಹಂಚಿಕೆಯನ್ನು ಹೆಚ್ಚಿಸಬೇಕೆಂದು ಮುಖ್ಯಮಂತ್ರಿ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


