ಹಾಸನದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ: ಬೆಳೆ ನಾಶ, ರೈತರಲ್ಲಿ ಮನೆ ಮಾಡಿದ ಆತಂಕ
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮಳೆ ಅಬ್ಬರ ಜೋರಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಆರ್ಭಟಕ್ಕೆ ಜನರು ಹೈರಾಣಾಗಿದ್ದಾರೆ.

ಹಾಸನ: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮಳೆ ಅಬ್ಬರ ಜೋರಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಆರ್ಭಟಕ್ಕೆ ಜನರು ಹೈರಾಣಾಗಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಕಳೆದ 48 ಗಂಟೆಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆ-ಸಕಲೇಶಪುರ, ಆಲೂರು, ಹಾಸನ, ಬೇಲೂರು, ಅರಕಲಗೂಡಿನಲ್ಲಿ ವರುಣನ ಅಬ್ಬರ, ಜನಜೀವನ ಸಂಪೂರ್ಣ ಅಸ್ತವ್ಯಸ್ತ-ಮಲೆನಾಡು ಭಾಗದಲ್ಲಿ ಭಾರಿ ಮಳೆ ಹಿನ್ನೆಲೆ-ಹೇಮಾವತಿ ಜಲಾಶಯಕ್ಕೆ ಒಳಹರಿವಿನಲ್ಲಿ ಏರಿಕೆಯಾಗಿದೆ.
ಭಾರೀ ಮಳೆಯಿಂದಾಗಿ ಬೆಳೆದು ನಿಂತ ಶುಂಠಿ, ಭತ್ತ, ಮತ್ತು ಜೋಳದ ಬೆಳೆಗಳಿಗೆ ಹಾನಿ ಉಂಟಾಗಿದೆ. ಅರಕಲಗೂಡು ಮತ್ತು ಸಕಲೇಶಪುರ, ಆಲೂರಿನ ನೂರಾರು ಎಕರೆ ಜಮೀನು ಜಲಾವೃತಗೊಂಡಿದೆ.
ಇನ್ನೂ ಮಳೆಯಿಂದ ಜಲಾವೃತ ಪ್ರದೇಶಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಆರ್. ಗಿರೀಶ್ ಹಾಗೂ ತಹಶೀಲ್ದಾರ್ ಮತ್ತು ಅಧಿಕಾರಿಗಳು ಪರಿಹಾರ ಕಾರ್ಯಗಳಿಗೆ ಮುಂದಾಗಿದ್ದಾರೆ. ತಗ್ಗು ಪ್ರದೇಶದಲ್ಲಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


