ವಿಧಾನಸೌಧದ ಕಾರಿಡಾರ್ ನಲ್ಲಿ ವಿಡಿಯೋ ಚಿತ್ರೀಕರಣ ಛಾಯಾಗ್ರಹಣ ಬಂದ್
ವಿಧಾನಸೌಧದ ಕಾರಿಡಾರ್ ಗಳಲ್ಲಿ ವಿಡಿಯೋ ಚಿತ್ರೀಕರಣ ಹಾಗೂ ಛಾಯಾಗ್ರಹಣವನ್ನು ಮಾಡುವುದನ್ನು ನಿರ್ಬಂಧಿಸಿ ಕರ್ನಾಟಕ ಸರ್ಕಾರ ಸಚಿವಾಲಯ ಸುತ್ತೋಲೆ ಹೊರಡಿಸಿದೆ.

ಬೆಂಗಳೂರು: ವಿಧಾನಸೌಧದ ಕಾರಿಡಾರ್ ಗಳಲ್ಲಿ ವಿಡಿಯೋ ಚಿತ್ರೀಕರಣ ಹಾಗೂ ಛಾಯಾಗ್ರಹಣವನ್ನು ಮಾಡುವುದನ್ನು ನಿರ್ಬಂಧಿಸಿ ಕರ್ನಾಟಕ ಸರ್ಕಾರ ಸಚಿವಾಲಯ ಸುತ್ತೋಲೆ ಹೊರಡಿಸಿದೆ.
ಈ ಸಂಬಂಧ ಸಿಬ್ಬಂದಿ ಆಡಳಿತ ಸುಧಾರಣಾ ಇಲಾಖೆ(ಕಾರ್ಯಕಾರಿ) ಇದರ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ರವೀಂದ್ರ ಸಚಿವರ ವಿಧಾನಸೌಧ ವಿಕಾಸಸೌಧದ ಕಚೇರಿಗಳಿಗೆ ಸುತ್ತೋಲೆ ಹೊರಡಿಸಿದ್ದು, ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಕಲಾಪಗಳು ಹಾಗೂ ಇನ್ನಿತರೇ ಸಂದರ್ಭಗಳಲ್ಲಿ ಕೆಲವು ಪತ್ರಿಕಾ ಹಾಗೂ ವಿದ್ಯುನ್ಮಾನ ಮಾಧ್ಯಮದವರು ವಿಧಾನಸೌಧ ಕಟ್ಟಡದ ಕಾರಿಡಾರ್ ಗಳಲ್ಲಿ ವಿಡಿಯೋ ಚಿತ್ರೀಕರಣ ಛಾಯಾಗ್ರಹಣ ಮಾಡುತ್ತಿದ್ದು, ಹಲವಾರು ಬಾರಿ ಗಣ್ಯ ವ್ಯಕ್ತಿಗಳ ಸುಗಮ ಚಲನವಲನಕ್ಕೆ ಅಡ್ಡಿಯುಂಟಾಗಿರುವುದು ಗಮನಕ್ಕೆ ಬಂದಿದ್ದು, ಸುಗಮ ಚಲನೆ ಹಾಗೂ ಭದ್ರತೆಯ ಹಿತದೃಷ್ಟಿಯಿಂದ ಮುಖ್ಯಮಂತ್ರಿಗಳು ಹಾಗೂ ಸಚಿವರಿಂದ ಹೇಳಿಕೆಯನ್ನು ಪಡೆಯುವ ಸಲುವಾಗಿ ವಿಧಾನಸೌಧದ ಕೆಂಗಲ್ ದ್ವಾರದ ಬಳಿ ಅವಕಾಶ ಕಲ್ಪಿಸಲಾಗಿದೆ ಎಂದರು.
ಇನ್ನುಮುಂದೆ ನಿರ್ದಿಷ್ಟಪಡಿಸಿದ ಜಾಗವನ್ನು ಹೊರತುಪಡಿಸಿ ಕಾರಿಡಾರ್ ಗಳಲ್ಲಿ ವಿಡಿಯೋ ಚಿತ್ರೀಕರಣ ಛಾಯಾಗ್ರಹಣವನ್ನು ನಿಷೇಧಿಸುವುದು ಸೂಕ್ತವೆಂಬ ಪ್ರಸ್ತಾವನೆಯು ಮುಖ್ಯಮಂತ್ರಿಯವರಿಂದ ಅನುಮೋದಿಸಲ್ಪಟ್ಟಿರುತ್ತದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


