ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯಕ್ಕೆ ತಾಂತ್ರಿಕ ಕೋರ್ಸ್ ಆರಂಭಿಸಲು ಎಐಸಿಟಿಇ ಅನುಮತಿ
ಕೇಂದ್ರ ಶಿಕ್ಷಣ ಸಚಿವಾಲಯದ ಶಾಸನಬದ್ಧ ಅಂಗವಾದ, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ನಿರ್ವಹಣಾ ವಿಭಾಗದಡಿ ಸ್ನಾತಕೋತ್ತರ ವ್ಯವಹಾರ ನಿರ್ವಹಣಾ ಕೋರ್ಸ್ ನಡೆಸಲು ಅನುಮತಿ ನೀಡಿದೆ.

ಮೈಸೂರು: ಕೇಂದ್ರ ಶಿಕ್ಷಣ ಸಚಿವಾಲಯದ ಶಾಸನಬದ್ಧ ಅಂಗವಾದ, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ನಿರ್ವಹಣಾ ವಿಭಾಗದಡಿ ಸ್ನಾತಕೋತ್ತರ ವ್ಯವಹಾರ ನಿರ್ವಹಣಾ ಕೋರ್ಸ್ ನಡೆಸಲು (ಮಾಸ್ಟರ್ ಆಫ್ ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್) ಅನುಮತಿಸಿದೆ."
ಮುಕ್ತ ಹಾಗೂ ದೂರಶಿಕ್ಷಣ ಮಾದರಿಯಡಿ ಎಂ.ಬಿ.ಎ. ಕೋರ್ಸ್ ನಡೆಸಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮಾನ್ಯತೆ ಪಡೆದಿರುವ ದೇಶದ ಏಕೈಕ ವಿಶ್ವವಿದ್ಯಾಲಯ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದು, ೨೦೨೧-೨೨ನೇ ಸಾಲಿಗೆ ಮುಕ್ತ ಹಾಗೂ ದೂರಶಿಕ್ಷಣ ಕಲಿಕಾ ವಿಧಾನದಡಿ ಎಂ.ಬಿ.ಎ. ಕೋರ್ಸ್ ಗೆ (ಜನರಲ್ ಅಡ್ಮಿನಿಸ್ಟ್ರೇಷನ್) 10,000ಸೀಟುಗಳಿಗೆ ಪ್ರವೇಶಾತಿ ಕಲ್ಪಿಸಲು ಎಐಸಿಟಿಇ ಅನುಮತಿಸಿದೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯಕ್ಕೆ ತಾಂತ್ರಿಕ ಕೋರ್ಸ್ ಆರಂಭಿಸಲು ಎಐಸಿಟಿಇ ಅನುಮತಿ ನೀಡಿರುವುದಕ್ಕೆ ಕೆಎಸ್ ಒಯು ಕುಲಪತಿ ವಿದ್ಯಾಶಂಕರ್ ಸಂತಸ ವ್ಯಕ್ತಪಡಿಸಿದ್ದಾರೆ. ದೇಶಾದ್ಯಂತ ಒಟ್ಟು 18 ಮುಕ್ತ ವಿಶ್ವ ವಿದ್ಯಾನಿಲಯಗಳು ಕಾರ್ಯ ನಿರ್ವಹಿಸುತ್ತಿದ್ದು, ಈ ಪೈಕಿ ಎಐಸಿಟಿಇ ಇಂದ ಮಾನ್ಯತೆ ಪಡೆದ ದೇಶದ ಮೊದಲ ಮುಕ್ತ ವಿವಿ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


