ಕೋವಿಡ್ 3ನೇ ಅಲೆ ಭೀತಿ: ಲಾಲ್ ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ರದ್ದು
ಕೊರೋನಾ ಸಂಭಾವ್ಯ ಮೂರನೇ ಅಲೆ ಭೀತಿಯ ಹಿನ್ನೆಲೆ ಬೆಂಗಳೂರು ಲಾಲ್ ಬಾಗ್ ಉದ್ಯಾನವನದಲ್ಲಿ ಆಗಸ್ಟ್ ತಿಂಗಳಲ್ಲಿ ನಡೆಯಬೇಕಿದ್ದ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ರದ್ದಾಗಿದೆ.

ಬೆಂಗಳೂರು: ಕೊರೋನಾ ಸಂಭಾವ್ಯ ಮೂರನೇ ಅಲೆ ಭೀತಿಯ ಹಿನ್ನೆಲೆ ಬೆಂಗಳೂರು ಲಾಲ್ ಬಾಗ್ ಉದ್ಯಾನವನದಲ್ಲಿ ಆಗಸ್ಟ್ ತಿಂಗಳಲ್ಲಿ ನಡೆಯಬೇಕಿದ್ದ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ರದ್ದಾಗಿದೆ.
ಕೊರೋನಾ ಎರಡನೇ ಅಲೆ ಇಳಿಕೆಯಾದ ಹಿನ್ನೆಲೆ ಫಲಪುಷ್ಪ ಪ್ರದರ್ಶನ ಆಯೋಜನೆಗೆ ನಿರ್ಧರಿಸಲಾಗಿತ್ತು. ಆದರೆ ಸಂಭವನೀಯ ಮೂರನೇ ಅಲೆ ಬಗೆಗೆ ತಜ್ನರ ಸುಳಿವಿನ ಹಿನ್ನೆಲೆ ಈ ಬಾರಿ ಫಲಪುಷ್ಪ ಪ್ರದರ್ಶನ ನಡೆಸದಿರಲು ತೀರ್ಮಾನಿಸಲಾಗಿದೆ.
ಇದಲ್ಲದೆ ಪ್ರದರ್ಶನದ ವೇಳೆ ಆಯೋಜಿಸಲ್ಪಡುತ್ತಿದ್ದ ಕಿರು ತೋಟ ಸ್ಪರ್ಧೆ, ಟೆರೇಸ್ ಗಾರ್ಡನ್ ಸ್ಪರ್ಧೆ ಸೇರಿದಂತೆ ಹಲವಾರು ಸ್ಪರ್ಧೆಗಳೂ ಸಹ ರದ್ದುಗೊಂಡಿದೆ.
ಇದಕ್ಕೆ ಹಿಂದೆ ಕೊರೋನಾ ಕಾರಣದಿಂದ ಕಳೆದ ವರ್ಷ ಆಗಸ್ಟ್ ನಲ್ಲಿ ಹಾಗೂ ಈ ವರ್ಷ ಜನವರಿಯಲ್ಲಿ ನಡೆಯಬೇಕಾಗಿದ್ದ ಫಲಪುಷ್ಪ ಪ್ರದರ್ಶನ ಸಹ ರದ್ದಾಗಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


