ರಾಜ್ಯದಲ್ಲಿ ಇಂದು ಕೊರೋನಾಗೆ 36 ಮಂದಿ ಬಲಿ: ಬೆಂಗಳೂರಿನಲ್ಲಿ 419 ಸೇರಿ 1,639 ಪ್ರಕರಣ ಪತ್ತೆ!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯಾಗಿದ್ದು ಇಂದು 1,639 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,88,341ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯಾಗಿದ್ದು ಇಂದು 1,639 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,88,341ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 36 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 36,262ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.
ಬೆಂಗಳೂರಿನಲ್ಲಿ ಇಂದು 419 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,23,226ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 7 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇಂದು 2,214 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,26,411ಕ್ಕೆ ಏರಿಕೆಯಾಗಿದೆ. ಇನ್ನು 25,645 ಸಕ್ರೀಯ ಪ್ರಕರಣಗಳಿವೆ.
ರಾಜ್ಯಾದ್ಯಂತ ಇಂದು 1,52,714 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,639 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.07ಕ್ಕೆ ಇಳಿದಿದೆ.
ರಾಜ್ಯದ ಇತರ ಜಿಲ್ಲೆಗಳಾದ ಬೆಳಗಾವಿ 61, ಚಿಕ್ಕಮಗಳೂರು 92, ದಕ್ಷಿಣ ಕನ್ನಡ 190, ಹಾಸನ 141, ಮೈಸೂರು 160, ಶಿವಮೊಗ್ಗ 37, ತುಮಕೂರು 63, ಉಡುಪಿ 104 ಪ್ರಕರಣಗಳು ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


