ಬೀದರ್: ಭಾರಿ ಮಳೆಗೆ ಮನೆ ಕುಸಿತ, ಮಹಿಳೆ ಸಾವು
ಬೀದರ್ ನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೀದರ್ ನಲ್ಲಿ ಮನೆಯ ಛಾವಣಿ ಕುಸಿತವಾಗಿದ್ದು, ದುರ್ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.

ಬೀದರ್: ಬೀದರ್ ನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೀದರ್ ನಲ್ಲಿ ಮನೆಯ ಛಾವಣಿ ಕುಸಿತವಾಗಿದ್ದು,. ದುರ್ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.
ಮಂಗಳವಾರ ತಡರಾತ್ರಿ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲ್ಲೂಕಿನ ಚಿಂಚೋಳಿ ಗ್ರಾಮದಲ್ಲಿ ಛಾವಣಿಯ ಕುಸಿತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಅಂತೆಯೇ ಘಟನೆಯಲ್ಲಿ 3 ಮಂದಿ ಗಾಯಗೊಂಡಿದ್ದು, ಮೃತರನ್ನು ವೈಜಿನಾಥ್ ವಡ್ಡಾರ್ ಅವರ ಪತ್ನಿ ಪಾರ್ವತಿ (35 ವರ್ಷ) ಎಂದು ಗುರುತಿಸಲಾಗಿದೆ.
ಕಳೆದ 3 ದಿನಗಳಿಂದ ಗ್ರಾಮದಲ್ಲಿ ನಿರಂತರ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಮನೆಯ ಮೇಲ್ಛಾವಣಿ ಕುಸಿದಿದೆ. ಛಾವಣಿ ಕುಸಿತದ ವೇಳೆ ಮನೆಯಲ್ಲಿ ಪತಿ ವೈಜಿನಾಥ್ ವಡ್ಡಾರ್, ಮೃತ ಪಾರ್ವತಿ, ಮಕ್ಕಳಾದ ಅಕ್ಷರಾ (7) ಮತ್ತು ಅರ್ಚನಾ (4) ಇದ್ದರು. ಈ ಪೈಕಿ ಪಾರ್ವತಿ ಅವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಇಲ್ಲಿನ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಹುಮ್ನಾಬಾದ್ ತಹಶೀಲ್ದಾರ್ ನಾಗಯ್ಯ ಹಿರೆಮಠ್, ಹನುಮಾಬಾದ್ ತಾಲ್ಲೂಕು ಪಂಚಾಯತ್ ಗೋವಿಂದ್ ಮತ್ತು ಪಿಎಸ್ಐ ರವಿಕುಮಾರ್ ಭೇಟಿ ನೀಡಿದರು. ಅಂತೆಯೇ ಮಾನದಂಡಗಳ ಪ್ರಕಾರ ಪರಿಹಾರವನ್ನು ನೀಡಲಾಗುತ್ತದೆ ಎಂದು ತಹಶೀಲ್ದಾರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


