ಚಿಕ್ಕಮಗಳೂರು: ಭೀಕರ ರಸ್ತೆ ಅಪಘಾತ, ಇಬ್ಬರು ಸಾವು
ಕರ್ನಾಟಕ ರಾಜ್ಯ ರೈತ ಸಂಘದ ಇಬ್ಬರು ಮುಖಂಡರು ಚಿಕ್ಕಮಗಳೂರಿನ ರಾಮನಹಳ್ಳಿ ಸಮೀಪ ಗುರುವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರೈತ ಸಂಘದ ಇಬ್ಬರು ಮುಖಂಡರು ಚಿಕ್ಕಮಗಳೂರಿನ ರಾಮನಹಳ್ಳಿ ಸಮೀಪ ಗುರುವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ರಾಜ್ಯ ರೈತ ಸಂಘದ ಮುಖಂಡರಾದ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಅರೇಹಳ್ಳಿಯ ರಾಮಸ್ವಾಮಿ (72) ಸ್ಥಳದಲ್ಲೇ ಮೃತಪಟ್ಟಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ, ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಎಚ್.ಮೊಗೇನಹಳ್ಳಿ ಗ್ರಾಮದ ಎಂ.ರಾಮು (65) ಅವರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ.
ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ನಡೆದ ರೈತ ಹುತಾತ್ಮ ದಿನಾಚರಣೆಯಲ್ಲಿ ಪಾಲ್ಗೊಂಡು ಹಾಸನ ಜಿಲ್ಲೆಯ ಬೇಲೂರಿಗೆ ಬರುತ್ತಿದ್ದ ವೇಳೆ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


