ಕೋವಿಡ್-19: ರಾಜ್ಯದಲ್ಲಿ ಸಾವು, ಪಾಸಿಟಿವಿಟಿ ಪ್ರಮಾಣದಲ್ಲಿ ಭಾರೀ ಇಳಿಕೆ
ರಾಜ್ಯದಲ್ಲಿ ಹೊಸ ಕೋವಿಡ್ ಪ್ರಕರಣಗಳ ಜತೆಗೆ ಮೃತಪಟ್ಟವರ ಸಂಖ್ಯೆಯೂ ಇಳಿಮುಖ ಕಂಡಿದ್ದು, ಗುರುವಾರ ಒಟ್ಟು 31 ಮಂದಿ ಸಾವಿಗೀಡಾಗಿರುವುದು ದೃಢಪಟ್ಟಿದೆ.

ಬೆಂಗಳೂರು: ರಾಜ್ಯದಲ್ಲಿ ಹೊಸ ಕೋವಿಡ್ ಪ್ರಕರಣಗಳ ಜತೆಗೆ ಮೃತಪಟ್ಟವರ ಸಂಖ್ಯೆಯೂ ಇಳಿಮುಖ ಕಂಡಿದ್ದು, ಗುರುವಾರ ಒಟ್ಟು 31 ಮಂದಿ ಸಾವಿಗೀಡಾಗಿರುವುದು ದೃಢಪಟ್ಟಿದೆ.
ರಾಜ್ಯದಲ್ಲಿ ಗುರುವಾರ 1,653 ಹೊಸ ಕೇಸ್ ಪತ್ತೆಯಾಗಿದ್ದು, ಪಾಸಿಟಿವಿಟಿ ಪ್ರಮಾಣ ಶೇ.7.74ರಿಂದ ಶೇ.7.72ಕ್ಕೆ ಕುಸಿದಿದೆ.
ಈ ನಡುವೆ ನಿನ್ನೆ ಒಂದೇ ದಿನ 2,572 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇದರೊಂದಿಗೆ ಚೇತರಿಕೆ ಪ್ರಮಾಣ ಶೇ.97.85ರಿಂದ ಶೇ.97.88ಕ್ಕೆ ಏರಿಕೆಯಾಗಿದೆ.
ಇನ್ನು ರಾಜ್ಯದಲ್ಲಿ ನಿನ್ನೆ 31 ಸಾವುಗಳು ಸಂಭವಿಸಿದ್ದು, ಜುಲೈ 20 ರ ನಂತರ ಪತ್ತೆಯಾದ ಎರಡನೇ ಅತಿ ಕಡಿಮೆ ದೈನಂದಿನ ಸಾವು ಇದಾಗಿದೆ. ಜು.20ರಂದು 29 ಸಾವುಗಳು ಸಂಭವಿಸಿದ್ದವು.
ಇದೀಗ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 36,293ಕ್ಕೆ ತಲುಪಿದ್ದು, ಸಾವಿನ ಪ್ರಮಾಣ ಶೇ.1.25ರಷ್ಟಿದೆ. ಇನ್ನು ಸಕ್ರಿಯ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ರಾಜ್ಯದಲ್ಲಿ ಇದೀಗ 24,695 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದುಬಂದಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆ 418 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 12,23,644 ಕ್ಕೆ ಏರಿಕೆಯಾಗಿದೆ. ಗುಣಮುಖರ ಪ್ರಮಾಣ ಶೇ.97.93ರಿಂದ ಶೇ.97.99ಕ್ಕೆ ಏರಿಕೆಯಾಗಿದೆ. ಮರಣ ಪ್ರಮಾಣ ಶೇ.1.29ರಷ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 9,495 ರಿಂದ 8,748ಕ್ಕೆ ಇಳಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


