ಶಾಲೆಗಳು ಆರಂಭಕ್ಕೂ ಮುನ್ನ ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ: ಸಚಿವ ಸುಧಾಕರ್
ಯಾವುದೋ ಒಂದು ದಿನ ಶಾಲೆಗಳನ್ನು ಆರಂಭಿಸಬೇಕಾಗುತ್ತದೆ. ಇದಕ್ಕೆ ಸಿದ್ಧತೆಯಾಗಿ ಶಾಲೆಗಳ ಎಲ್ಲ ಸಿಬ್ಬಂದಿಗೆ ಆದ್ಯತೆಯಲ್ಲಿ ಕೋವಿಡ್ ಲಸಿಕೆ ನೀಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಗುರುವಾರ ಹೇಳಿದ್ದಾರೆ.

ಬೆಂಗಳೂರು: ಯಾವುದೋ ಒಂದು ದಿನ ಶಾಲೆಗಳನ್ನು ಆರಂಭಿಸಬೇಕಾಗುತ್ತದೆ. ಇದಕ್ಕೆ ಸಿದ್ಧತೆಯಾಗಿ ಶಾಲೆಗಳ ಎಲ್ಲ ಸಿಬ್ಬಂದಿಗೆ ಆದ್ಯತೆಯಲ್ಲಿ ಕೋವಿಡ್ ಲಸಿಕೆ ನೀಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಗುರುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವಅವರು, ಶಾಲೆಗಳನ್ನು ಯಾವುದೋ ಒಂದು ದಿನ ಆರಂಭಿಸಲೇಬೇಕು. ಮಕ್ಕಳು ಯಾವಾಗಲೂ ಆನ್ ಲೈನ್ ತರಗತಿಯ ಮುಂದೆ ಕುಳಿತುಕೊಳ್ಳಲು ಸಾಧ್ಯವಿಲ್ಲ. ಆನ್ ಲೈನ್ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಅಪಾಯವಿದೆ. ಆದ್ದರಿಂದ ಎಲ್ಲವನ್ನೂ ಅಳೆದು ತೂಗಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಪರಿಣಿತರ ಅಭಿಪ್ರಾಯ, ಸಲಹೆ ಪಡೆದು ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಶಾಲೆಯ ಸಿಬ್ಬಂದಿ ವರ್ಗವನ್ನು ವಿಶೇಷ ಗುಂಪಾಗಿ ಪರಿಗಣಿಸಿ ಅವರಿಗೆ ಆದ್ಯತೆಯಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯ ಆರಂಭಿಸಬೇಕೆಂದು ತೀರ್ಮಾನಿಸಲಾಗಿದೆ. ಮಕ್ಕಳ ಪೋಷಕರಿಗೆ, ಕುಟುಂಬದವರಿಗೆ ಲಸಿಕೆ ನೀಡಲಾಗಿದೆ. ಇನ್ನೂ ಕೆಲ ದಿನಗಳು ಕಳೆದರೆ ಲಸಿಕೆ ಪಡೆದವರ ಸಂಖ್ಯೆ 3 ಕೋಟಿಗೆ ತಲುಪಲಿದೆ. ಅನೇಕರಿಗೆ ಪಾಸಿಟಿವ್ ಬಂದು ಹೋಗಿ ಅವರಲ್ಲಿ ಆ್ಯಂಟಿಬಾಡಿ ಉತ್ಪಾದನೆಯಾಗಿರುವುದೂ ಇದೆ.
ವೈದ್ಯಕೀಯ ಶಿಕ್ಷಣ ಕಾಲೇಜುಗಳನ್ನು ನಡೆಸಲು ಅವಕಾಶ ನೀಡಲಾಗಿದೆ. ಉನ್ನತ ಶಿಕ್ಷಣದಲ್ಲಿ ಕಾಲೇಜು ಆರಂಭಿಸಲು ತೀರ್ಮಾನಿಸಲಾಗುತ್ತಿದೆ. ಇದೇ ರೀತಿ ಹಂತಹಂತವಾಗಿ ನೋಡಿಕೊಂಡು ಈ ಬಗ್ಗೆ ತೀರ್ಮಾನಿಸಲಾಗುತ್ತದೆ. ಇಂತಹ ತೀರ್ಮಾನವನ್ನು ಬಹಳ ಎಚ್ಚರದಿಂದ ತೆಗೆದುಕೊಳ್ಳಬೇಕು. ಮುಖ್ಯಮಂತ್ರಿಗಳೊಂದಿಗಿನ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


